NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು: ಇಂದು ಬೀಡನಹಳ್ಳಿಯಲ್ಲಿ ಚಾಮುಂಡೇಶ್ವರಿ ಹಬ್ಬದ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷದಂತೆ ಈ ವರ್ಷವೂ ನಾಡ ದೇವತೆ ಶ್ರೀ ಚಾಮುಂಡೇಶ್ವರಿಯ ಅಮ್ಮನವರ ಹಬ್ಬ ಇಂದು (ಸೆ.26) ಬೀಡನಹಳ್ಳಿ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ.

ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಇದಕ್ಕೂ ಮುನ್ನಾ ಬನ್ನೂರು ಸಮೀಪ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಮಾರಮ್ಮ ಹಾಗೂ ಮುತ್ತತ್ತಿರಾಯನ ಪೂಜೆಗಳನ್ನು ಹೂ ಹೊಂಬಾಳಿ ಮಾಡಿಕೊಂಡು ಬರುವ ಮೂಲಕ ಹಬ್ಬದ ಸಡಗರವಿಲ್ಲ ಇಮ್ಮಡಿಗೊಳ್ಳಲಿದೆ.

ಇನ್ನು ಗ್ರಾಮದ ಹಬ್ಬದ ಸಡಗರ ಮನೆ ಮಾಡಿದೆ. ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ನವರಾತ್ರಿಯ ಐದನೆ ದಿನವಾದ ಇಂದು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. ಜತೆಗೆ ಗ್ರಾಮದ ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಾಲಂಕರವನ್ನು ಮಾಡಲಾಗಿದ್ದು ರಾಜ ಬೀದಿಗಳು ಚಿತ್ತಾರದಿಂದ ಕಂಗೊಳಿಸುತ್ತಿವೆ.

ಹಬ್ಬದ ಅಂಗವಾಗಿ ಗ್ರಾಮ ದೇವತೆ ಚಾಮುಂಡಿಗೆ ವಿಶೇಷ ಮೊದಲ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ಮನೆ ಮಾಡಿತು.

ಇಂದು ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಗ್ರಾಮಗಳ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ತಾಯಿ ಚಾಮುಂಡಿಯ ದೇವಸ್ಥಾನವನ್ನು ತಲುಪುತ್ತಾರೆ.

ಬಳಿ ತಾವು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಹೆಂಗಳೆಯರು ಭಕ್ತಿಭಾವದಿಂದ ನಾಡದೇವತೆಗೆ ಪೂಜೆ ನೆರವೇರಿಸುತ್ತಾರೆ.

ಇದಕ್ಕೂ ಮುನ್ನ ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೊರಟ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಚಾಮುಂಡಿ ದೇವಸ್ಥಾನ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕುವರು.

ಹೆಂಗಳೆಯರು ಹೊತ್ತು ತಂದ ಪೂಜಾರತಿಗೆ ತೀರ್ಥ ಪ್ರೊಕ್ಷಣೆ ಮಾಡುವರು. ಆ ನಂತರ ದೇವಾಲಯದಾವರಣದಲ್ಲೇ ಗ್ರಾಮದೇವತೆ ಚಾಮುಂಡಿಗೆ ಪೂಜೆ ನೆರವೇರಿಸಲಾಗುವುದು.

Megha
the authorMegha

Leave a Reply

error: Content is protected !!
Latest news
BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ