NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಸೆ.30ರಂದು ಕಾಯಂ ನೌಕರರಿಗೆ ಮುಂಗಡವಾಗಿ 15000 ರೂ. ತರಬೇತಿ ನೌಕರರಿಗೆ 5000 ರೂ. ಪಾವತಿಸಲು ಎಂಡಿ ಆದೇಶ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ
  • ಕೂಟದ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ  ವ್ಯವಸ್ಥಾಪಕ ನಿರ್ದೇಶಕರು

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

ಹುಬ್ಬಳ್ಳಿ: ಅಕ್ಟೋಬರ್ ಮೊದಲ ವಾರದಲ್ಲಿ ದಸರಾ ಹಬ್ಬ ಇರುವುದರಿಂದ ಸಂಸ್ಥೆಯ ನೌಕರರ ಹಿತದೃಷ್ಟಿಯಿಂದ ದಸರಾ ಹಬ್ಬಕ್ಕೆ ಮುಂಚಿತವಾಗಿ ವೇತನ ಮುಂಗಡವಾಗಿ ಕಾಯಂ ನೌಕರರಿಗೆ 15000 ರೂ.ಗಳನ್ನು ಹಾಗೂ ತರಬೇತಿ ನೌಕರರಿಗೆ 5000 ರೂ.ಗಳನ್ನು ಎಲ್ಲ ಸೆ.30 ರಂದು ಪಾವತಿಸಲು ಎಂಡಿ ಅನುಮೋದನೆ ನೀಡಿದ್ದಾರೆ.

ವೇತನ ಮುಂಗಡ ಪಾವತಿಯ ಕುರಿತು ಸೂಕ್ತಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಮುಖ್ಯ ಲೆಕ್ಕಾಧಿಕಾರಿಗಳು ತಿಳಿಸಿದ್ದು, ಬಳಿಕ ಈ ಮೊತ್ತವನ್ನು ಸೆಪ್ಟೆಂಬರ್ ವೇತನದಲ್ಲಿ ಕಡಿತಗೊಳಿಸಲು ಎಲ್ಲ ಅಧಿಕಾರಿಗಳು ಪಾಲನೆ ಮಾಡುವಂತೆ ತಿಳಿಸಿದ್ದಾರೆ.

ಇನ್ನು ಈ ಸಂಬಂಧ ಸೆ.29 ರಂದು ಕೇಂದ್ರ ಕಚೇರಿಯಿಂದ ಎಲ್ಲ ವಿಭಾಗಗಳಿಗೆ ನಿಧಿ ವರ್ಗಾವಣೆ ಮಾಡಲಾಗುತ್ತದೆ. ಆದ್ದರಿಂದ, ಈ ನಿಧಿಯನ್ನು ಉಪಯೋಗಿಸಿ ತಮ್ಮ ವಿಭಾಗದ ಎಲ್ಲ ಅಧಿಕಾರಿ/ಸಿಬ್ಬಂದಿಗಳಿಗೆ ವೇತನ ಮುಂಗಡವನ್ನು ಸೆ.30 ರಂದು ನೌಕರರ ಕುಂದು ಕೊರತೆಗೆ ಅಸ್ಪದ ನೀಡದಂತೆ NEFT/RTGS ಮುಖಾಂತರ ಪಾವತಿಸಬೇಕು.

ಈ ಮುಂಗಡ ಮೊತ್ತವನ್ನು ಪಾವತಿಸುವ ಸಂದರ್ಭದಲ್ಲಿ ನೌಕರರು ಈ ಹಿಂದಿನ ತಿಂಗಳಲ್ಲಿ ಪಡೆದ ನಿವ್ವಳ ವೇತನ ಮತ್ತು ಸೆಪ್ಟೆಂಬರ್ ತಿಂಗಳ ಹಾಜರಾತಿಗೆ ಅನುಗುಣವಾಗಿ ಸೆಪ್ಟೆಂಬರ್-2025ರ ವೇತನದಲ್ಲಿ ಕಡ್ಡಾಯವಾಗಿ ಕಡಿತಗೊಳಿಸುವುದನ್ನು ಗಮನದಲ್ಲಿರಿಸಿಕೊಂಡು ಪಾವತಿಸಲು ಕ್ರಮಕೈಗೊಳ್ಳಬೇಕು.

ಈ ವೇತನ ಮುಂಗಡ ಕಡಿತವನ್ನು Payroll ತಂತ್ರಾಂಶದಲ್ಲಿ Pay Code 34ನ್ನು ಬಳಸಿ ಕಡಿತಗೊಳಿಸಬೇಕು. ಮುಂದುವರೆದು, ಅಕ್ಟೋಬರ್ 7ರಂದು ಮಹರ್ಷಿ ವಾಲ್ಮೀಕಿ ಜಯಂತಿಯ ನಿಮಿತ್ತವಾಗಿ ಸಾರ್ವತ್ರಿಕ ರಜೆ ಇರುವುದರಿಂದ ಸೆಪ್ಟೆಂಬರ್ ತಿಂಗಳ ವೇತನವನ್ನು ಒಂದು ದಿನ ಮುಂಚಿತವಾಗಿ ಅ.6 ರಂದು ಪಾವತಿಸಲು ಸಹ ಕ್ರಮ ಕೈಗೊಳ್ಳುವಂತೆ ಈ ಮೂಲಕ ತಿಳಿಸಿದ್ದಾರೆ.

ಮನವಿ ಮಾಡಿದ್ದ ಕೂಟದ ಪದಾಧಿಕಾರಿಗಳು: ಹುಬ್ಬಳ್ಳಿಯ ಕೇಂದ್ರ ಕಚೇರಿಯಲ್ಲಿ ವಾಯುವ್ಯ ವಲಯ ನೌಕರರ ಕೂಟ ವ್ಯವಸ್ಥಾಪಕ ನಿರ್ದೇಶಕರನ್ನು ಸೆ.2ರಂದು  ಭೇಟಿಯಾಗಿ ನಾಡಹಬ್ಬ ದಸರಾ ನಿಮಿತ್ತ ವೇತನವನ್ನು 30.09.2025 ರಂದು ಪಾವತಿ ಮಾಡಲು ವಿನಂತಿಸಿ ಮನವಿಪತ್ರ ಸಲ್ಲಿಸಿದರು. ಈ ವೇಳೆ ವ್ಯವಸ್ಥಾಪಕ ನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿ ಸೆ.30 ರಂದು ವೇತನದ ಬದಲಾಗಿ 15000 ರೂ.ಗಳನ್ನು ಮುಂಗಡ ಪಾವತಿ ಮಾಡಲು ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.

Advertisement

ರಾಜ್ಯದ ಅತಿದೊಡ್ಡ ನಾಡಹಬ್ಬವಾದ ನವರಾತ್ರಿ ಹಬ್ಬವು ಈಗಾಗಲೇ ಪ್ರಾರಂಭವಾಗಿದ್ದು, ಅಕ್ಟೋಬರ್ ತಿಂಗಳ ಒಂದನೇ ತಾರೀಖು ಆಯುಧ ಪೂಜೆ ಹಾಗೂ ಎರಡನೇ ತಾರೀಖು ವಿಜಯ ದಶಮಿಯಾಗಿದ್ದು, ಸಾರಿಗೆ ನೌಕರರು ಈ ಹಬ್ಬವನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ಭಕ್ತಿ ಮತ್ತು ಸಂಭ್ರಮದಿಂದ ಆಚರಣೆ ಮಾಡಲಾಗುವುದು.

ಈ ನಡುವೆ ನಮ್ಮ NWKRTC ಸಂಸ್ಥೆಯ ನೌಕರರಿಗೆ ವೇತನವು ತಿಂಗಳ 6ನೇ ತಾರೀಖು ಆಗುವುದರಿಂದ ನಮ್ಮ ನೌಕರರು ನಾಡಹಬ್ಬವನ್ನು ವೇತನವಿಲ್ಲದೆ ಆಚರಣೆ ಮಾಡಲು ಸಾಲ ಅಥವಾ ಇತರೆ ಮೂಲಗಳಿಂದ ಹಣವನ್ನು ಹೊಂದಿಸಿಕೊಳ್ಳುವ ಅನಿವಾರ್ಯ ಪರಿಸ್ಥಿತಿ ಬರುತ್ತದೆ.

ಈಗಾಗಲೇ ಕೆ.ಕೆ.ಆ‌ರ್.ಟಿ.ಸಿ. ಮತ್ತು ಕೆ.ಎಸ್.ಆರ್.ಟಿ.ಸಿ. ಸಾರಿಗೆ ನಿಗಮಗಳು ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಮುನ್ನವೇ ಸೆಪ್ಟೆಂಬರ್ ತಿಂಗಳ ವೇತನವನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, NWKRTC ಸಂಸ್ಥೆಯ ನೌಕರರು ಈ ಬಾರಿಯ ನಾಡಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಣೆ ಮಾಡಲು ಸೆಪ್ಟೆಂಬರ್ ತಿಂಗಳ ವೇತನವನ್ನು ಈ ತಿಂಗಳ ಕೊನೆಯ ದಿನವೇ ನೀಡಲು ಕ್ರಮವಹಿಸಬೇಕೆಂದು ಕೋರಿದ್ದರು.

Megha
the authorMegha

Leave a Reply

error: Content is protected !!