CrimeNEWSನಮ್ಮಜಿಲ್ಲೆ

ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ದಾಳಿ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ಗುರುವಾರ ದಾಳಿ ನಡೆಸಿ, ಕ್ಲಿನಿಕ್‍ಗಳನ್ನು ಬಂದ್ ಮಾಡಿಸಿದ್ದಾರೆ.

ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ಗಳನ್ನು ಪರಿಶೀಲಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ, ನಕಲಿ ವೈದ್ಯರ ಹತ್ತಿರ ಕೆ.ಪಿ.ಎಂ.ಇ. ನೋಂದಣಿ ದಾಖಲೆಗಳು ಇಲ್ಲದೆ ನಿಯಮಬಾಹಿರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿದ್ದು, ಆ ಕ್ಲಿನಿಕ್‍ಗಳಿಗೆ ಬೀಗ ಹಾಕಿ ಬಂದ್ ಮಾಡಿದ್ದಾರೆ. ಜತೆಗೆ ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಆರ್.ಎಂ.ಪಿ./ ನಕಲಿ ವೈದ್ಯರು ವೈದ್ಯಕೀಯ ತಪಾಸಣೆ ಸ್ಥಗಿತಗೊಳಿಸತಕ್ಕದ್ದು. ಒಂದು ವೇಳೆ ಜಿಲ್ಲಾಡಳಿತದ ಸೂಚನೆಯನ್ನು ನಿರ್ಲಕ್ಷಿಸಿದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು