NEWSನಮ್ಮರಾಜ್ಯ

ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

ಕರ್ನೂಲ್‌ ಮೂಲದ ವಿದ್ಯಾರ್ಥಿ l ಆತಂಕದಲ್ಲಿ 900 ಮಕ್ಕಳು, ಸಿಬ್ಬಂದಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರುಸಿದ್ಧಗಂಗಾ ಮಠದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಪಾಸಿಟಿವ್ ಶುಕ್ರವಾರ ದೃಢಪಟ್ಟಿದ್ದು,ಇದರಿಂದ 900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಆಂಧ್ರಪ್ರದೇಶದ ಕರ್ನೂಲ್‌ ಮೂಲದ ಸಿದ್ಧಗಂಗಾ ಮಠದ ವಿದ್ಯಾರ್ಥಿಯಲ್ಲಿ ಸೋಂಕು ದೃಢಪಟ್ಟಿರುವುದು ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಗೊಂದಲ ಉಂಟಾಗಿದೆ.

ಈ ವಿದ್ಯಾರ್ಥಿ ಲಾಕ್ ಡೌನ್ ನಂತರ ಊರಿಗೆ ತೆರಳಿದ್ದ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಉದ್ದೇಶದಿಂದ ಜೂನ್ 15 ರಂದು ವಾಪಸ್ ಮಠಕ್ಕೆ ಬಂದಿದ್ದು, ಕರ್ನೂಲ್ ನಲ್ಲಿ ಕೊವಿಡ್ -19 ರ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷಿಸಿದಾಗ ಅದು ಇಂದು ಪಾಸಿಟಿವ್ ವರದಿ ಬಂದಿದೆ.

ವಿದ್ಯಾರ್ಥಿಯನ್ನು ನಿಗದಿತ ಕೊವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮತ್ತೊಮ್ಮೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವಿದ್ಯಾರ್ಥಿಗೆ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಎರಡನೇ ಪರೀಕ್ಷೆಯ ವರದಿ ಇನ್ನು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿದ್ಯಾರ್ಥಿಯ ರೂಮ್ ನಲ್ಲಿದ್ದ ಇತರೆ ಮೂವರು ವಿದ್ಯಾರ್ಥಿಗಳನ್ನು ಮಠದ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಲಾಕ್ ಡೌನ್ ಜಾರಿಗೊಳಿಸಿದ ನಂತರ ಮಠದಲ್ಲಿದ್ದ ಬಹುತೇಕ ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಕೇವಲ 150 ವಿದ್ಯಾರ್ಥಿಗಳು ಮಾತ್ರ ಮಠದಲ್ಲಿದ್ದರು. ಆದರೆ ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 750 ಮಕ್ಕಳು ಮತ್ತೆ ಹಾಸ್ಟೆಲ್ ಗೆ ಬಂದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಒಟ್ಟಿಗೆ ವಾಸ ಮಾಡುತ್ತಿದ್ದು, ಒಂದೇ ಬಾತ್ ರೂಂ ಮತ್ತು ಶೌಚಾಲಯ ಬಳಸಿದ್ದಾರೆ. ಇದು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್