NEWSನಮ್ಮಜಿಲ್ಲೆನಮ್ಮರಾಜ್ಯ

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದ್ದು, ಇದರ ಭಾಗವಾಗಿ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿಯ ಬನ್ನಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ನಾಡಿಗೆ ಜನತೆ ಸಮೃದ್ಧಿಯಿಂದ ಇರುವಂತೆ ಪ್ರಾರ್ಥಿಸಿದ್ದಾರೆ.

ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಸಲಾಯಿತು. ಬಳಿಕ ಯದುವೀರ್ ಒಡೆಯರ್‌, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಪೂರ್ಣವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಪೂರ್ಣಗೊಂಡಿದೆ.

ಇನ್ನು ಈ ವೇಳೆ ಪೊಲೀಸ್‌ ಬ್ಯಾಂಡ್‌ ಜತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Deva
the authorDeva

Leave a Reply

error: Content is protected !!