NEWSನಮ್ಮಜಿಲ್ಲೆನಮ್ಮರಾಜ್ಯ

ದಸರಾಗೆ ಕ್ಷಣಗಣನೆ: ಜಂಬೂ ಸವಾರಿ ಜತೆಗೆ ಸಾಗಲಿವೆ 58 ಸ್ತಬ್ಧಚಿತ್ರಗಳು- ಭಾಗಿಯಾಗಲಿವೆ 150ಕ್ಕೂ ಹೆಚ್ಚು ಕಲಾತಂಡಗಳು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮೆರುಗು ಹೆಚ್ಚಿದ್ದು, ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಜಂಬೂಸವಾರಿ ಇಂದು ಸಂಜೆ ನಡೆಯಲಿದ್ದು, ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಇಲಾಖೆಗಳು 31ಜಿಲ್ಲೆಗಳಿಂದ 58 ಸ್ತಬ್ಧಚಿತ್ರಗಳು ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಲಿವೆ.

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಸಾಗಲು ಸಿದ್ಧಗೊಂಡಿವೆ. 31 ಜಿಲ್ಲೆಗಳು ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 58 ಟ್ಯಾಬ್ಲೋಗಳು ಅಂಬಾವಿಲಾಸ ಅರಮನೆಯ ಆವರಣದಲ್ಲಿ ಸಿದ್ಧಗೊಂಡಿವೆ.

ಟ್ಯಾಬ್ಲೋಗಳ ಮೂಲಕ ತಮ್ಮ ಸ್ಥಳೀಯ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಯೋಜನೆಗಳು ಸೇರಿದಂತೆ ಹಲವು ಮಹತ್ವ ಸಾರಲಿವೆ. ಈ ಎಲ್ಲ ಸ್ತಬ್ಧಚಿತ್ರಗಳು ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಸಿದ್ಧವಾಗಿ ನಿಂತಿವೆ.

ಜತೆಗೆ ಮೆರವಣಿಗೆಯಲ್ಲಿ 150ಕ್ಕೂ ಅಧಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ಇನ್ನೂ ಜಂಬೂ ಸವಾರಿ ಹಿನ್ನೆಲೆ ಮೈಸೂರಿನಾದ್ಯಂತ ಬಿಗಿ ಪೊಲೀಸ್‌ ಭದ್ರತೆ ಮಾಡಿಕೊಳ್ಳಲಾಗಿದ್ದು, ವಿವಿಧ ಜಿಲ್ಲೆಗಳಿಂದ ಪೊಲೀಸ್ ಪಡೆಯನ್ನು ಕರೆಸಿಕೊಳ್ಳಲಾಗಿದೆ.

ಇನ್ನು ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಬೆಳಗಾವಿಯಿಂದ ಗರುಡ ಪಡೆ, ಶ್ವಾನದಳ, ಬಾಂಬ್ ಸ್ಕ್ವಾಡ್ ಆಗಮಿಸಿದೆ. ಜತೆಗೆ ಜಂಬೂಸವಾರಿ ಸಾಗುವ ಮಾರ್ಗದ ಉದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಅಂಬಾರಿ ಸಾಗುವ ಮಾರ್ಗದಲ್ಲಿ ಹೆಚ್ಚುವರಿ ಸಿಸಿಟಿವಿ ನಿಯೋಜನೆ ಮಾಡಲಾಗಿದೆ. ಬನ್ನಿಮಂಟಪ ಸೇರಿದಂತೆ ನಗರದ ರಾಜಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು