NEWSಸಿನಿಪಥ

“ಓಂ ಪ್ರೇಮ”  ಚಿತ್ರದೊಡನೆ  ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಮಿಂಚಲಿದ್ದಾರೆ ಹರ್ಷಿಕಾ ಪೂಣಚ್ಚ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹರ್ಷಿಕಾ ಪೂಣಚ್ಚ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಲು ತಯಾರಾಗಿದ್ದು  ಅಡವಿಬಾವಿ ಶರಣ್ ನಿರ್ದೇಶನದ “ಓಂ ಪ್ರೇಮ”  ಚಿತ್ರದೊಡನೆ ರೀ ಎಂಟ್ರಿ ಕೊಡುತ್ತಿದ್ದಾರೆ.

ಈ ಚಿತ್ರದಲ್ಲಿ ಮಹಿಳಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ  ಹರ್ಷಿಕಾ ಈ ಹಿಂದೆ “ಚಿಟ್ಟೆ” ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ನಾಯಕಿಯಾಗಿ ನಟ್ಟಿಸಿದರು. ಅಲ್ಲದೆ  2019 ರಲ್ಲಿ ಬಿಡುಗಡೆಯಾದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ “ಉದ್ಘರ್ಷ”ದ ಭಾಗವಾಗಿದ್ದರು. ಆರ್.ಆರ್. ಖುಷಿ ಎಂಟರ್‌ಟೈನ್‌ಮೆಂಟ್ ಪ್ರಸ್ತುತಪಡಿಸುತ್ತಿರುವ ರಾಮ್ ಪ್ರೀತ್ ನಿರ್ಮಿಸಿದ ಈ ಚಿತ್ರದಲ್ಲಿ ಕ್ವಾಟ್ಲ್ ಖ್ಯಾತಿಯ ಪಾರ್ಥ ಕೂಡ ನಟಿಸಿದ್ದಾರೆ.

“ಓಂ ಪ್ರೇಮ” ಚಿತ್ರಕ್ಕೆ ಗೌಸ್ ಪೀರ್ ಸಂಭಾಷಣೆ, ಜಾಸ್ಸಿ ಗಿಫ್ಟ್ ಸಂಗೀತವಿದೆ. ಛಾಯಾಗ್ರಾಹಕರಾಗಿ ನಂದ ಕಿಶೋರ್ ಹಾಗೂ  ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನ ಈ ಚಿತ್ರಕ್ಕಿದೆ. ಡ್ಯಾನಿ ಕುಟ್ಟಪ್ಪ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಶೇ. 40 ರಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಹರ್ಷಿಕಾ ಪೂಣಚ್ಚ ಅವರೊಂದಿಗೆ ಮಾತುಕತೆ ನಡೆಸಿದ್ದು, ಲಾಕ್‌ಡೌನ್ ಅವಧಿಯಲ್ಲಿ ಒಪ್ಪಂದವನ್ನು ಅಂತಿಮಗೊಳಿಸಿಕೊಂಡಿದೆ. .

“ನಾವು ಈಗ ಶೂಟಿಂಗ್ ಪುನಾರಂಭಿಸಲು ತಯಾರಾಗುತ್ತಿದ್ದೇವೆ ಈ ಶೆಡ್ಯೂಲ್ ಹೆಚ್ಚಾಗಿ ಹರ್ಷಿಕಾ ಅವರ ಪಾತ್ರದ ಕುರಿತಾಗಿರಲಿದೆ ಎಂದು ನಿರ್ದೇಶಕ ಹೇಳುತ್ತಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು