ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ನಂದಿ ಧ್ವಜಕ್ಕೆ ಪೂಜೆ ಮಧ್ಯಾಹ್ನ1 ರಿಂದ 1.18 ಗಂಟೆಯ ಶುಭ ಧನುರ್ ಲಗ್ನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪೂಜೆ ನೆರವೇಸಿದರು.
ಅರಮನೆ ಆವರಣದ ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಸಿಎಂ ಈಡುಗಾಯಿ ಒಡೆದರು. ಆದರೆ, ಎರಡು ಸಲ ಕಾಯಿ ಒಡೆಯದೆ ವಿಫಲರಾದರು. ಆದರೂ ಛಲಬಿಡದೆ ಸಿಎಂ ಮೂರನೇ ಬಾರಿಗೆ ಈಡುಗಾಯಿ ಒಡೆಯುವಲ್ಲಿ ಯಶಸ್ವಿಯಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿಖ್ಯಾತ ಜಂಬೂಸವಾರಿ ಇಂದು ನಡೆಯಲಿದೆ. ಈಗಾಗಲೇ ನಂದಿ ಧ್ವಜ ಪೂಜೆ ನೆರವೇರಿದೆ. ಎಲ್ಲ ಪ್ರವಾಸಿಗರಿಗೆ ಸ್ವಾಗತ ಕೋರುತ್ತೇನೆ ಎಂದು ತಿಳಿಸಿದರು.
ಈ ಹಿಂದೆ ಸಿಎಂ ಆಗಿದ್ದಾಗಲೂ ನಾನು ದಸರಾದಲ್ಲಿ ಭಾಗಿಯಾಗಿದ್ದೇನೆ. ಸಿಎಂ ಆಗಿ 8 ಸಲ ದಸರಾಕ್ಕೆ ಬಂದಿದ್ದೇನೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ರಾಜ್ಯದ ಜನ ಎಲ್ಲರೂ ಖುಷಿಯಾಗಿದ್ದರೆ ಸರ್ಕಾರ ಸಹ ಸಂತೋಷವಾಗಿರುತ್ತದೆ ಎಂದು ಹೇಳಿದರು.
ಇದಕ್ಕೂ ಮುನ್ನ ಅರಮನೆ ಬಲರಾಮ ದ್ವಾರದ ಕೋಡಿ ಸೋಮೇಶ್ವರ ದೇವಾಲಯದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸುವ ವೇಳೆ ಸಚಿವ ಮಹಾದೇವಪ್ಪ, ಭೈರತಿ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.
Related
