ಬೆಂಗಳೂರು: ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಮೂವರು ಯುವಕರು ಧಾರುಣವಾಗಿ ಮೃತಪಟ್ಟಿರುವ ಘಟನೆ ಯಲಹಂಕದ ಜಿಕೆವಿಕೆ ಬಳಿ ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ನಡೆದಿದೆ.
ನಾಗವಾರ ಗೋವಿಂದಪುರದ ಮಹ್ಮದ್ ಹದಿ, ಅಹಮದ್ ಖಾನ್ ಹಾಗೂ ಸೈಯದ್ ರಿಯಾಜ್ ಮೃತ ಯುವಕರು. ಇಬ್ಬರು ಸ್ಥಳದಲ್ಲೇ ಮೃತಪಪಟ್ಟಿದ್ದರೆ ಮತ್ತೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.
ಭಾನುವಾರ ಸೂರ್ಯಗ್ರಹಣ ಇದ್ದ ಹಿನ್ನೆಲೆಯಲ್ಲಿ ರಸ್ತೆ ಖಾಯಾಗಿತ್ತು. ಇದರಿಂದ ಈ ಯುವಕರು ಬೈಕ್ ವ್ಹೀಲಿಂಗ್ ಮಾಡಲು ಬಂದಿದ್ದಾರೆ. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.
ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.