CRIMENEWSನಮ್ಮರಾಜ್ಯ

KKRTC ಬಸ್‌- ಲಾರಿ ನಡುವೆ ಭೀಕರ ಡಿಕ್ಕಿ: 8ವರ್ಷದ ಮಗು ಮೃತ, ಚಾಲಕನ ಕಾಲುಗಳು ಕಟ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಮಗು ಮೃತಪಟ್ಟಿದ್ದು ಬಸ್‌ ಚಾಲಕರ ಎರಡು ಕಾಲುಗಳು ಕಟ್‌ಆಗಿ ತಲೆಗೆ ತೀವ್ರ ಗಾಯವಾಗಿದೆ. ಅಲ್ಲದೆ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ದೇವರಹಿಪ್ಪರಗಿಯಲ್ಲಿ ನಡೆದಿದೆ.

ವಿಜಯಪುರ ವಿಭಾಗದ 2ನೇ ಘಟಕ ಬಸ್‌ ಮತ್ತು ಲಾರಿ ನಡುವೆ ದೇವರಹಿಪ್ಪರಗಿ ಹತ್ತಿರ ಅಪಘಾತವಾಗಿದೆ. ಶುಕ್ರವಾರ ರಾತ್ರಿ ಸುಮಾರ 9.30ರಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಬಸ್‌ ಚಾಲಕನ ಎರಡು ಕಾಲುಗಳು ಕಟ್‌ಆಗಿವೆ. ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 8 ವರ್ಷದ ಮಗು ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್‌ ಚಾಲಕ ಗುತ್ತಿಗೆ ಆಧಾರದಲ್ಲಿ ಡ್ಯೂಟಿ ಮಾಡುತ್ತಿದ್ದರು.  ಇನ್ನು ಲಾರಿ ಚಾಲಕನ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಇತ್ತ ವಿಷಯ ತಿಳಿದ ಕೂಡಲೇ ದೇವರಹಿಪ್ಪರಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತಕ್ಕೆ ಏನು ಕಾರಣ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಅಪಘಾತದ ರಭಸಕ್ಕೆ ಬಸ್‌ನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಗ್ಲಾಸ್‌ಗಳು ಚೂರು ಚೂರಾಗಿ ಕಿತ್ತು ಬಿದ್ದಿದೆ.

ಅಪಘಾತ ಸಂಬಂಧ ದೇವರಹಿಪ್ಪರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ