NEWSನಮ್ಮಜಿಲ್ಲೆ

ವಿಕಲಚೇತನರು, ಹಿರಿಯರ ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು: ಸೈಯಿದಾ ಆಯಿಷಾ

ವಿಜಯಪಥ ಸಮಗ್ರ ಸುದ್ದಿ
  • 64 ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆ ವಿತರಣೆ

ಬೆಂಗಳೂರು ಗ್ರಾಮಾಂತರ: ಸಮಾಜದಲ್ಲಿ ವಿಶೇಷಚೇತನರನ್ನು ಮತ್ತು ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಜೊತೆಗೆ ಅವರನ್ನು ಗೌರವಯುತವಾಗಿ ಬದುಕು ನಡೆಸಲು ನಾವೆಲ್ಲರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಅಲಿಂಕೋ ಸಂಸ್ಥೆ ಸಹಯೋಗ ಆಯೋಜಿಸಿದ್ದ ಹಾಗೂ ಸಿಎಸ್ಆರ್ ಅನುದಾನದಡಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶೇಷಚೇತನರಲ್ಲಿ ತನ್ನದೇ ಅದ ವಿಶಿಷ್ಟ ಕಲೆ, ಶಕ್ತಿ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾನತೆ, ಗೌರವಯುತವಾಗಿ ನೋಡಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು. ಅಲಿಂಕೊ ಸಂಸ್ಥೆಯು ಉತ್ತಮ ಕೆಲಸ ಮಾಡಿದ್ದು ಅವರಿಗೆ ಧನ್ಯವಾದ ಎಂದರು.

149 ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸಿಎಸ್ಆರ್ ಅನುದಾನದಲ್ಲಿ 44.71ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮತ್ತು 161 ವಿಕಲಚೇತನರಿಗೆ ಅಡಿಪ್ ಯೋಜನೆಯಡಿ 12.55 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮಾಡಲಾಗಿದೆ.

ಇನ್ನು 83 ಹಿರಿಯ ನಾಗರಿಕರಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 6.88 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮಾಡಲಾಗಿದ್ದು ಒಟ್ಟಾರೆ 393 ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ವೀಲ್ಚೇರ್, ಯಂತ್ರಚಾಲಿತ ವೀಲ್ ಚೇರ್, ಕ್ರಚರ್ಸ್, ಕ್ಯಾಲಿಪರ್ಸ್ ವಾಕರ್, ಶ್ರವಣ ಸಾಧನ ಹಾಗೂ ಇತರೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಯುಟಿಐ ಮತ್ತು ಐ.ಟಿ.ಎಸ್.ಎಲ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಬಾಸ್ಟಿನ್ ಪಾಲ್ ಹಾಗೂ ಬೆಂಗಳೂರು ವಿಭಾಗದ ಮ್ಯಾನೇಜರ್ ಮಹೇಶ್ವರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾ ಲಕ್ಷ್ಮೀ, ಅಲಿಂಕೋ ಸಂಸ್ಥೆಯ ಮ್ಯಾನೇಜರ್ ಎ.ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ