NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಮಂಜೂರು ಮಾಡಲು ಆದೇಶಿಸಿ: ಸಿಎಂಗೆ ಷಡಾಕ್ಷರಿ ಮನವಿ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂ ಹಾಗೂ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯಗಳಿಗೆ ಮನವಿ ಮಾಡಿದೆ.

ಈ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯಗಳಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ತನ್ನ ಆದೇಶದಲ್ಲಿ 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಮಂಜೂರು ಮಾಡಿ ಆದೇಶಿಸಿದೆ.

ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ 01-07-2025 ರಿಂದ ಅನ್ವಯವಾಗುವಂತೆ ಶೇ.3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!