Please assign a menu to the primary menu location under menu

NEWSಆರೋಗ್ಯನಮ್ಮಜಿಲ್ಲೆ

ವಿಜಯಪುರ: ಅವಳಿ ಮಕ್ಕಳಿಗೆ ಜನ್ಮನೀಡಿದ ಕೊರೊನಾ ಸೋಂಕಿತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಜಿಲ್ಲಾ ಕೊರೊನಾ  ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಕೊರೊನಾ ಸೋಂಕಿತೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು  ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇಂದು ಮಹಿಳೆಗೆ ಸಹಜ ಹೆರಿಗೆ ಆಗಿದೆ. ಭಾನುವಾರವಷ್ಟೇ ಗರ್ಭಿಣಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.

ಇಂದು ಬೆಳಗ್ಗೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೊರೊನಾ ಸುರಕ್ಷತಾ ಕ್ರಮ ಕೈಗೊಂಡ ವೈದ್ಯರು ಗರ್ಭಿಣಿಗೆ ಚಿಕಿತ್ಸೆ ನೀಡಿ, ಸಾಮನ್ಯಾ ಹೆರಿಗೆ ಮಾಡಿಸಿದ್ದಾರೆ.

ನವಜಾತ ಶಿಶುಗಳು 2 ಕೆಜಿ ಹಾಗೂ 2.1 ಕೆಜಿ ತೂಕ ಹೊಂದಿದ್ದು, ತಾಯಿ ಮತ್ತು ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶರಣಪ್ಪ ಕಟ್ಟಿ ಮಾಹಿತಿ ನೀಡಿದ್ದಾರೆ.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಿದ ವೇಳೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು.

Leave a Reply

error: Content is protected !!
LATEST
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ