NEWSನಮ್ಮರಾಜ್ಯ

ಕೊರೊನಾದಿಂದ ಮೃತಪಟ್ಟ ಪೊಲೀಸರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುಕೊರೊನಾ ಸೋಂಕಿನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು  ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಪೊಲೀಸರಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು,  ಅವರ ಕುಟುಂಬದವರಲ್ಲೂ ಭಯವಿದೆ. ಆದರೆ, ಪೊಲೀಸ್ ಇಲಾಖೆ ಪ್ರಮುಖ ಜವಾಬ್ದಾರಿ ಹೊಂದಿದ್ದು ಕೊರೊನಾ ಸೋಂಕು ತಗುಲದಂತೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಕಂಟೈನ್​ಮೆಂಟ್​ ಪ್ರದೇಶ ನಿಯಂತ್ರಣ ಮಾಡುವುದರ ಜತೆಗೆ ಜನರ ರಕ್ಷಣೆ ಮಾಡುವ ಹೊಣೆಯೂ ನಮ್ಮ ಪೊಲೀಸರ ಮೇಲಿದೆ. ಹೀಗಾಗಿ ಅವರಲ್ಲಿ  ಅಧಿಕ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ಇನ್ನು ನಮ್ಮ ಆರಕ್ಷ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರೆ ಬೆಂಗಳೂರಿನಲ್ಲಿ ಅವರಿಗೇ ಪ್ರತ್ಯೇಕವಾಗಿಯೇ ಚಿಕಿತ್ಸೆ ನೀಡಲು ಐದು ಕೋವಿಡ್-19 ಆಸ್ಪತ್ರೆ ಗುರುತಿಸಲಾಗಿದೆ.ಇಲ್ಲಿ   ಉತ್ತಮ ಚಿಕಿತ್ಸೆ ಜತೆಗೆ  ತಪಾಸಣೆ ತಡವಾಗಬಾರದು ಎಂಬ ಉದ್ದೇಶದಿಂದ ಪೊಲೀಸರಿಗಾಗಿಗೆ ಹೆಚ್ಚು ತಪಾಸಣೆ ಸೆಂಟರ್ ಕೇಳಲಾಗಿದೆ.  ಎಸಿಎಸ್ ಅವರೊಂದಿಗೆ ಮಾತನಾಡಿದ್ದು,  ಪ್ರತ್ಯೇಕ ಆಸ್ಪತ್ರೆ, ಟೆಸ್ಟಿಂಗ್ ಘಟಕ ನೀಡಲಿದ್ದಾರೆ ಎಂದು ವಿವರಿಸಿದರು.

ಈ ನಡುವೆ ಕರ್ತವ್ಯದಲ್ಲಿದ್ದ ಇಲಾಖೆಯ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಆರೋಗ್ಯದ ದೃಷ್ಟಿಯಿಂದ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಗೃಹ ಇಲಾಖೆ ಆದೇಶ ಹೊರಡಿಸಿದೆ.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್