NEWSನಮ್ಮರಾಜ್ಯ

ಬಿಎಂಟಿಸಿ ಚಾಲಕನಿಗೆ ಕೊರೊನಾ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಾಲಕನ ಸ್ವಗ್ರಾಮ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜ್ವರ ಬಂದ ಬಳಿಕ ರಜೆಹಾಕಿ ತನ್ನೂರಿಗೆ ಹೋಗಿದ್ದ  ಬಿಎಂಟಿಸಿ ಚಾಲಕರೊಬ್ಬರಿಗೆ ಹಾಸನದಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕ  ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 14ರಂದು ರಜೆ ಹಾಕಿ ಅರಸೀಕೆರೆ ತಾಲೂಕಿನ ಸ್ವಗ್ರಾಮಕ್ಕೆ ಹೋಗಿದ್ದರು.

ಆ ಗ್ರಾಮದಲ್ಲೇ ಉಳಿದು ಕೊಂಡು  ಮೂರು ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ   ಪಡೆದುಕೊಂಡಿದ್ದರು. ಆದರೆ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರದ  ಹಿನ್ನೆಲೆಯಲ್ಲಿ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಆ ಚಾಲಕನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.

ಸೋಂಕು ಇರುವುದು ಖಚಿತವಾಗುತ್ತಿದ್ದಂತೆ  ಚಾಲಕ ವಾಸವಾಗಿದ್ದ ಗ್ರಾಮವನ್ನೇ ಸೀಲ್‍ಡೌನ್ ಮಾಡಲಾಗಿದೆ. ಇವರು  ಕರ್ತವ್ಯ ನಿರ್ವಹಿಸಿದ ಸ್ಥಳ, ಅವರು ಯಾರ ಜತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್