CRIMENEWSನಮ್ಮಜಿಲ್ಲೆ

ಸ್ನೇಹಿತರ ಜತೆ ಕ್ವಾರೆಯಲ್ಲಿ ಈಜಲು ಹೋದ PUC ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 17ರ ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಿತ್ತನಹಳ್ಳಿಯ ಬೋಳಾರೆ ಕ್ವಾರೆಯಲ್ಲಿ ಭಾನುವಾರ ನಡೆದಿದೆ.

ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಪೃತ್ವಿಕ್ (17) ಮೃತ ಬಾಲಕ. ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಭಾನುವಾರ (ಅ.12) ಮಧ್ಯಾಹ್ನ ಮೃತ ಬಾಲಕ ಸೇರಿ ಒಟ್ಟು ಆರು ಸ್ನೇಹಿತರು ಈಜಾಡಲು ಬೋಳಾರೆ ಕ್ವಾರೆಗೆ ತೆರಳಿದ್ದರು.

ಈ ವೇಳೆ ಪೃತ್ವಿಕ್ ಈಜು ಬಾರದಿದ್ದರೂ ಸ್ನೇಹಿತರ ಒತ್ತಾಯಕ್ಕೆ ಮಣಿದ ಮೃತ ಬಾಲಕ ಕ್ವಾರೆಗೆ ಇಳಿದು, ನೀರಿನಲ್ಲಿ ಮುಳುಗಿದ್ದಾನೆ. ಅದನ್ನು ಕಂಡ ಆತನ ಸ್ನೇಹಿತರು ಭಯದಿಂದ ಸ್ಥಳದಿಂದ ಪರಾರಿಯಾಗಿದ್ದಾರೆ.

ಸದ್ಯ ಮೃತ ಬಾಲಕನ ಪೋಷಕರು ಸ್ನೇಹಿತರಿಂದಲೇ ನಮ್ಮ ಮಗ ಮೃತಪಟ್ಟಿರುವುದು ಎಂದು ಆರೋಪಿಸಿದ್ದು, ಬಾಳಿ ಬದುಕಬೇಕಿದ್ದ ಬಾಲಕ ಹುಡುಗರ ಸಹವಾಸದಿಂದ ಅಸುನೀಗಿರುವುದಕ್ಕೆ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ