NEWSನಮ್ಮರಾಜ್ಯ

ಜೂನ್‌ 24- ರಾಜ್ಯದಲ್ಲಿ ಕೊರೊನಾ ರೌದ್ರನರ್ತನ 397 ಮಂದಿಯಲ್ಲಿ ಸೋಂಕು ದೃಢ, 14 ಜನರು ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 397 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಮೂಲಕ ಸೋಂಕಿತರ ಸಂಖ್ಯೆ  10,118ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 14  ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 168ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).

ಬಳ್ಳಾರಿಯ 28 ವರ್ಷದ ಯುವಕ ಕೊರೊನಾಗೆ ಬಲಿಯಾಗಿದ್ದು, ಬೆಂಗಳೂರಿನಲ್ಲಿ 5, ಬಳ್ಳಾರಿ 4, ರಾಮನಗರ, ಕಲಬುರಗಿ ತಲಾ 2, ತುಮಕೂರಿನಲ್ಲಿ  ಒಬ್ಬರು ಬಲಿಯಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

24 ಗಂಟೆಗಳಲ್ಲಿ ರಾಜ್ಯದಲ್ಲಿ 149 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 6,151 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 3,799 ಸಕ್ರಿಯ ಪ್ರಕರಣಗಳಿವೆ. 112 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕಂಡುಬಂದಿರುವ 397 ಹೊಸ ಪ್ರಕರಣಗಳಲ್ಲಿ75 ಮಂದಿ ಹೊರರಾಜ್ಯ ಮತ್ತು 8 ಮಂದಿ ಅಂತಾರಾಷ್ಟ್ರ ಪ್ರಯಾಣದ ಇತಿಹಾಸ ಹೊಂದಿದ್ದಾರೆ.

ಇಂದು ಬೆಂಗಳೂರಿನಲ್ಲಿ 173,  ಮೈಸೂರು 7, ಬಳ್ಳಾರಿ 34, ಕಲಬುರಗಿ 22, ರಾಮನಗರ 22, ಉಡುಪಿ 14, ಯಾದಗಿರಿ 13, ದಕ್ಷಿಣಕನ್ನಡ 12, ಧಾರವಾಡ 12, ಕೊಪ್ಪಳ 11, ರಾಯಚೂರು 9, ಉತ್ತರಕನ್ನಡ 9, ದಾವಣಗೆರೆ 8, ಚಿಕ್ಕಬಳ್ಳಾಪುರ 8, ಬೆಂಗಳೂರು ಗ್ರಾಮಾಂತರ 7, ಗದಗ 6, ಕೋಲಾರ 6, ಬೀದರ್ 5, ವಿಜಯಪುರ 4, ಶಿವಮೊಗ್ಗ 3, ಮಂಡ್ಯ, ಚಿತ್ರದುರ್ಗ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ ಇಬ್ಬರು, ಬೆಳಗಾವಿ, ಹಾಸನ, ತುಮಕೂರು ಮತ್ತು ಚಿಕ್ಕಮಗಳೂರು ತಲಾ ಒಂದೊಂದು ಪ್ರಕರಣ ತಪ್ಪೆಯಾಗಿದೆ.

ಸಾವನ್ನಪ್ಪಿದರ ವಿವರ:
1) ರೋಗಿ 7,606: ಬೆಂಗಳೂರು ನಗರದ 59 ವರ್ಷದ ಮಹಿಳೆ. ವಿಷಮ ಶೀತ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಜೂನ್ 10 ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ಮಧುಮೇಹವು ಇತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 24 ರಂದು ಸಾವನ್ನಪ್ಪಿದ್ದರು.

2) ರೋಗಿ 7,816: ಬೆಂಗಳೂರು ನಗರದ 54 ವರ್ಷದ ಮಹಿಳೆ. ವಿಷಮ ಶೀತ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾರಣದಿಂದ ಜೂನ್ 17 ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 23 ರಂದು ಮೃತಪಟ್ಟಿದ್ದಾರೆ.

3) ರೋಗಿ 9,071: ಬಳ್ಳಾರಿ ಜಿಲ್ಲೆಯ 59 ವರ್ಷದ ಪುರುಷ. ವಿಷಮ ಶೀತ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 20 ರಂದು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 23 ರಂದುಸಾವನ್ನಪ್ಪಿದ್ದರು.

4) ರೋಗಿ 9,665: ಬಳ್ಳಾರಿ ಜಿಲ್ಲೆಯ 73 ವರ್ಷದ ವೃದ್ಧ. ವಿಷಮ ಶೀತ ಜ್ವರ, ಉಸಿರಾಟದ ಸಮಸ್ಯೆ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಮಧುಮೇಹದ , ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು. ಜೂನ್ 21 ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರುಜೂನ್ 24 ರಂದು ಸಾವನ್ನಪ್ಪಿದ್ದರು.

5) ರೋಗಿ 9,844: ಕಲಬುರಗಿ ಜಿಲ್ಲೆಯ 78 ವರ್ಷದ ವೃದ್ಧ. ತೀವ್ರ ಉಸಿರಾಟದ ಸಮಸ್ಯೆ, ಕೆಮ್ಮಿನಿಂದ ಬಳಲುತ್ತಿದ್ದರು. ಅಧಿಕ ರಕ್ತದೊತ್ತಡ ಹಾಗೂ ದೀರ್ಘಕಾಲದ ಶ್ವಾಸಕೋಶದ ಸಮಸ್ಯೆ ಇತ್ತು.

6) ರೋಗಿ 9845: ಕಲಬುರಗಿಯ 55 ವರ್ಷದ ಪುರುಷ. ಉಸಿರಾಟದ ತೊಂದರೆ, ಕೆಮ್ಮು ಇತ್ತು. ಜೂನ್ 21ರಂದು ದಾಖಲಾಗಿದ್ದರುಜೂನ್ 22ರಂದು ಮೃತಪಟ್ಟಿದ್ದಾರೆ.

7) ರೋಗಿ 9860: ಬಳ್ಳಾರಿಯ 43 ವರ್ಷದ ವ್ಯಕ್ತಿ. ಜ್ವರದ ಲಕ್ಷಣಗಳು, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವು ಸಹ ಕಾಣಿಸಿಕೊಂಡಿತ್ತು. ಜೂನ್ 22ರಂದು ದಾಖಲಾದ ದಿನವೇ ರೋಗಿ ಸಾವನ್ನಪ್ಪಿದ್ದು, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.

8) ರೋಗಿ 9878: ಬಳ್ಳಾರಿಯ 28 ವರ್ಷದ ಯುವಕ. ವಿಷಮ ಶೀತ ಜ್ವರದ ಲಕ್ಷಣಗಳು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

9) ರೋಗಿ 9900: ತುಮಕೂರಿನ 56 ವರ್ಷದ ಪುರುಷ. ಉಸಿರಾಟದ ತೊಂದರೆ ಕಾಣಿಕೊಂಡ ಹಿನ್ನೆಲೆಯಲ್ಲಿ ಜೂನ್ 22ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 23ರಂದು ನಿಧನರಾಗಿದ್ದಾರೆ.

10) ರೋಗಿ 9925: ರಾಮನಗರದ 53 ವರ್ಷದ ಪುರುಷ, ವಿಷಮ ಶೀತ ಜ್ವರದ ಲಕ್ಷಣಗಳು ಕಾಣಿಸಿಕೊಂಡಿತ್ತು. ಜೂನ್ 24ರಂದ ನಿವಾಸದಲ್ಲಿಯೇ ಸಾವನ್ನಪ್ಪಿದ್ದಾನೆ. ಡಯಾಬಿಟಿಸ್ ನಿಂದ ಬಳಲುತ್ತಿದ್ದರು.

11) ರೋಗಿ 9926: ರಾಮನಗರದ 60 ವರ್ಷದ ವೃದ್ಧ. ರೋಗಿ 8515 ಸಂಪರ್ಕದಿಂದ ಸೋಂಕು ತಗುಲಿತ್ತು. ಜೂನ್ 21ರಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಜೂನ್ 24ರಂದು ನಿಧನರಾಗಿದ್ದಾರೆಡಯಾಬಿಟಿಸ್, ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.

12) ರೋಗಿ 9961: ಬೆಂಗಳೂರಿನ 70 ವರ್ಷದ ವೃದ್ಧೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಾಖಲಾದ ದಿನವೇ ವೃದ್ಧೆ ಅಸುನೀಗೀದ್ದಾರೆ.

13) ರೋಗಿ 9962: ಬೆಂಗಳೂರಿನ 50 ವರ್ಷದ ಮಹಿಳೆ. ವಿಷಮ ಶೀತ ಜ್ವರದ ಲಕ್ಷಣಗಳು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಾಖಲಾದ ದಿನವೇ  ಸಾವನ್ನಪ್ಪಿದ್ದಾರೆ. ಮಹಿಳೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

14) ರೋಗಿ 9966: ಬೆಂಗಳೂರಿನ 68 ವರ್ಷದ ವೃದ್ಧೆ. ವಿಷಮ ಶೀತ ಜ್ವರದ ಲಕ್ಷಣಗಳು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಾಖಲಾದ ದಿನವೇ ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು