CRIMENEWSನಮ್ಮಜಿಲ್ಲೆ

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ಸಿಲುಕಿ ಆತ್ಮಹತ್ಯೆ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಹೆಬ್ರಿ: ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಸೋಮವಾರ ತಡರಾತ್ರಿ ಬಾರಕೂರು ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮೃತರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

Megha
the authorMegha

Leave a Reply

error: Content is protected !!