ಚಿತ್ರದುರ್ಗ-ಬೀದರ್: ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು


ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿರುವ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿದಂತೆ ಇತರೆ ಕಡೆ ಬೆಳ್ಳಂಬೆಳಗ್ಗೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ಕೊಟ್ಟಿದ್ದಾರೆ. ಈ ವೇಳೆ ಹಲವು ಮಹತ್ವದ ದಾಖಲಿಗಳ ಪರಿಶೀನೆ ನಡೆಸುತ್ತಿದ್ದಾರೆ.
ಚಿತ್ರದುರ್ಗ/ಬೀದರ್: ಬೆಳ್ಳಂಬೆಳಗ್ಗೆ ಚಿತ್ರದುರ್ಗ, ಬೀದರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿರುವ ಅಧಿಕಾರಿಗಳು ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೂಳಪ್ಪ ಎಂಬುವರ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಿದ್ದಾರೆ.
ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಇನ್ನು ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಚಿತ್ರದುರ್ಗ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.


ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಚಂದ್ರಕಾಂತ್ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸುತ್ತಿದ್ದಾರೆ.
Related
