NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಲಾಕ್‌ಡೌನ್‌ ಬೇಕೆ ಬೇಡವೇ ಕುರಿತು ಮಧ್ಯಾಹ್ನ 1ಕ್ಕೆ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ  ರಾಜ್ಯಾದ್ಯಂತ ಲಾಕ್‌ಡೌನ್‌ ಮಾಡಬೇಕೆ ಬೇಡವೆ ಎಂದು ಸಚಿವರು ಮತ್ತು ಅಧಿಕಾರಿಗಳ ಸಲಹೆ ಪಡೆಯಲು ಇಂದು ಮಧ್ಯಾಹ್ನ 1ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಭೆ ಕರೆದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಡೆಯುವ ಸಭೆಯಲ್ಲಿ ಅಧಿಕಾರಿಗಳು ಮತ್ತು ಸಚಿವರು ಏನು ಹೇಳುತ್ತಾರೆ ಎಂಬುದರ ಮೇಲೆ ಮುಂದಿನ ದಿನ ಕ್ರಮ ಜರುಗಿಸಲಾಗುವುದು. ಅಲ್ಲದೆ ಜನರು ಕೂಡ ಅನ್‌ಲಾಕ್‌ ಸಾಮಜೀಕ ಅಂತರ ಕಾಯ್ದುಕೊಂಡು ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ನಾಳೆ ಬೆಂಗಳೂರು ನಗರದ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು, ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದು ಬೆಂಗಳೂರನ್ನು ಲಾಕ್‌ಡೌನ್‌ ಮಾಡಬೇಕೆ ಬೇಡವೇ ಎಂಬುದರ ಬಗ್ಗೆ ಸ್ಪಷ್ಟತೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಇಂದಿನಿಂದ ಆರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲೆ ಇರುವುದರಿಂದ ಈ ಪರೀಕ್ಷೆ ಮುಗಿಯುವ ವರೆಗೂ ಅಂದರೆ ಜುಲೈ 4ರವರೆಗೂ ಯಾವುದೇ ಇಂಥ ಲಾಕ್‌ಡೌನ್‌ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಅಭಿಪ್ರಾಯ ತಿಳಿಸಿದ್ದಾರೆ.

 

 

 

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್