NEWSದೇಶ-ವಿದೇಶ

ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಹೃದಯಸ್ತಂಭನದಿಂದ ನಿಧನ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

ಪಣಜಿ: ಹೃದಯಸ್ತಂಭನದಿಂದ (Cardiac Arrest) ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಣಜಿಯಿಂದ 30 ಕಿಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದು, ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು.

ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ 1 ಗಂಟೆ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಇನ್ನು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ Xನಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಕೂಡ ರವಿ ನಾಯ್ಕ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಚಿವ ರವಿ ನಾಯ್ಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕರ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಮೋದಿ X ಮಾಡಿದ್ದಾರೆ.

Advertisement
Megha
the authorMegha

Leave a Reply

error: Content is protected !!