NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ಸದ್ಯಕ್ಕೆ ಲಾಕ್‌ಡೌನ್‌ ಆಗಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸದ್ಯಕ್ಕೆ ಬೆಂಗಳೂರನ್ನು ಲಾಕ್‌ಡೌನ್‌ ಮಾಡುವ ಮನಸ್ಥಿತಿಯಲ್ಲಿ ಸರ್ಕಾರ ಇಲ್ಲ. ಹೀಗಾಗಿ ಕಾಂಗ್ರೆಸ್‌ , ಜೆಡಿಎಸ್‌ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿ ಸಭೆಯಿಂದ ಹೊರನಡೆದಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸಿಎಂ ಕರೆದಿದ್ದ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಕುರಿತ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಕರು ಬಳಿಕ ಸಭೆಯಿಂದ ಹೊರನಡೆದರು.

ಇನ್ನು ಸರ್ಕಾರ ಯಾವುದೇ ಕಾರಣಕ್ಕೂ ಬೆಂಗಳೂರನ್ನು ಲಾಕ್‌ಡೌನ್‌ ಮಾಡುವ ಸ್ಥಿತಿಯಲ್ಲಿ ಇಲ್ಲ ಕಾರಣ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸದ್ಯ ಬಾಧಿಸುತ್ತಿದ್ದು, ಅದನ್ನು ಸರಿದೂಗಿಸುವುದೇ ಕಷ್ಟವಾಗಿದೆ. ಇಂಥ ವಿಷಮ ಸ್ಥಿತಿಯಲ್ಲಿ ಲಾಕ್‌ಡೌನ್‌ ಮಾಡಿದರೆ ಜನರಿಗೆ ಬೇಕಾದ ನಿತ್ಯದ ವಸ್ತುಗಳನ್ನು ಕೊಡುವುದಕ್ಕೆ ಸರ್ಕಾರಕ್ಕೆ ಕಷ್ಟಸಾಧ್ಯವಾಗುವುದು.

ಹೀಗಾಗಿ  ಲಾಕ್‌ಡೌನ್‌ ಮಾಡದೆಯೇ ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣ ಹೇಗೆ ಸಾಧ್ಯ ಎಂಬುದನ್ನು ತಿಳಿಸಿ ಎಂದು ಶಾಸಕರನ್ನು ಸಿಎಂ ಕೇಳಿದ್ದಾರೆ ಎಂದು ಹೇಳಲಾಗಿದೆ. ಆದ್ದರಿಂದ ಶಾಸಕರು ತಮ್ಮ ಅಭಿಪ್ರಾಯವನ್ನಷ್ಟೇ ತಿಳಿಸಿ ಸಭೆಯಿಂದ ಹೊರನಡೆದಿದ್ದಾರೆ. ಇನ್ನು ಮುಂದಿನ ತೀರ್ಮಾನವನ್ನು ಸರ್ಕಾರ ಪ್ರಕಟಿಸಬೇಕಿದೆ.

Leave a Reply

error: Content is protected !!
LATEST
5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ