CrimeNEWSನಮ್ಮರಾಜ್ಯ

ತಂಗಿಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದ ಸಹೋದರ ಸಾವು

ಪೊಲೀಸರು ಬೀಸಿದ ಲಾಠಿ ಏಟಿನಿಂದ ಮೃತಪಟ್ಟ ಎಂಬ ಆರೋಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ತನ್ನ ತಂಗಿಯನ್ನು ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಗೆ ಕರೆತಂದಿದ್ದ ಅಣ್ಣ ಮೃತಪಟ್ಟಿದ್ದು, ಪೊಲೀಸರು ಬೀಸಿದ ಲಾಠ ಏಟಿನಿಂದ ಮೃತಪಟ್ಟಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇಂದು ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆಂದು ತಂಗಿಯನ್ನು ಕರೆತಂದಿದ್ದ 19 ವರ್ಷದ ಯುವಕ ಸಾಗರ ಚಲವಾದಿ ಮೃತ.

ತಂಗಿಯನ್ನು ಪರೀಕ್ಷೆಗೆ ಕಳುಹಿಸಿ ಪರೀಕ್ಷೆ ಮುಗಿಯುವವರೆಗೂ ಶಾಲೆಯ ಬಳಿಯೇ ಕಾದು ಕುಳಿತ್ತಿದ್ದ, ಸ್ವಲ್ಪ ಸಮಯದ ನಂತರ ತಂಗಿಗೆ ನಕಲು ಚೀಟಿ ಕೊಡಲು ಹೋಗುತ್ತಿದ್ದಾಗ ಪೊಲೀಸರು ಆತನನ್ನು ಬೆನ್ನಟ್ಟಿದ್ದಾರೆ. ಈ ನಡುವೆ ಪೊಲೀಸರಿಗೆ ಹೆದರಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಇಲಾಖೆ ಹೇಳಿದೆ.

ಆದರೆ ಸಾಗರ್ ಕುಟುಂಬಸ್ಥರು ಮಾತ್ರ ಪೊಲೀಸರು ಲಾಠಿಯಿಂದ ಹೊಡೆದ ಕಾರಣ ನನ್ನ ಮಗ   ಮೃತಪಟ್ಟಿದ್ದಾನೆ ಎಂದು ದೂರಿತ್ತಿದ್ದು, ಇದಲ್ಲೆ ಪುಷ್ಟಿ ನೀಡುವಂತೆ, ಪ್ರತ್ಯಕ್ಷದರ್ಶಿಯೊಬ್ಬ ಪರೀಕ್ಷಾ ಕೇಂದ್ರದ ಹೊರಗಡೆ ನಾವು ಕಾದು ಕುಳಿತಿದ್ದೇವು. ಆಗ ಪೊಲೀಸರು ಇಲ್ಲಿ ಕೂರಬಾರದು ಹೋಗಿ ಎಂದು ಹೇಳಿದರು.

ಅವರು ಹೇಳುತ್ತಿದ್ದಂತ್ತೆ ನಾವು ಎಂದು ಬೈಕ್ ಹತ್ತಿ ಹೋಗುತ್ತಿದ್ದೇವು. ಆಗ ಪೇದೆಯೊಬ್ಬರು ನನ್ನ ಕಾಲಿಗೆ ಲಾಠಿಯಿಂದ ಹೊಡೆದರು. ನಂತರ ನನ್ನ ಹಿಂದೆ ಕುಳಿತ್ತಿದ್ದ ಸಾಗರ್ ಬೆನ್ನಿಗೂ ಹೊಡೆದರು. ಅವರಿ ಲಾಠಿಯಿಂದ ಹೊಡೆದ ಏಟಿನ ನೋವು ತಾಳಲಾರದೆ ಆತ ಕೆಳಗಡೆ ಬಿದ್ದ. ನಂತರ ಆವನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದೆವು ಎಂದು ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ಹೇಳಿದ್ದಾನೆ.

ಇದರಿಂದ ಸಾಗರ್‌ ಪೊಲೀಸರು ಬೀಸಿದ ಲಾಠಿಯಿಂದ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರ ಸತ್ಯಾಸತ್ಯತೆ ತಿಳಿಯಬೇಕಾದರೆ ಹಿರಿಯ ಪೊಲೀಸ್‌ ಅಧಿಕಾರಿಗಳು ತನಿಖೆ ಮಾಡಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.

1 Comment

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್