NEWSಆರೋಗ್ಯಬೆಂಗಳೂರು

ಬಡವರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯ ಪಡೆಯಲು ಸಾಧ್ಯ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿರುವುದು ಶ್ಲಾಘನೀಯವಾದುದ್ದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ.ವೆಂಕಟೇಶ್ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.

ಇನ್ನು ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್‌ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.

ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನು ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ರೋಗಿಗಳಿಗೆ ನೆರವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...