NEWSನಮ್ಮರಾಜ್ಯರಾಜಕೀಯ

ನಾಳೆಯಿಂದ ನೈಟ್‌ ಕರ್ಫ್ಯೂ ಜಾರಿ, ಐದು ದಿನವಷ್ಟೇ ಸರ್ಕಾರಿ ಕಚೇರಿಗಳು ಓಪನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮರೆತ್ತಿರುವುದರಿಂದ ತತ್ತರಿಸಿರುವ ಸರ್ಕಾರ ರಾತ್ರಿ 8ಗಂಟೆಯಿಂದ ನಿತ್ಯ ಜನರ ಓಡಾಟಕ್ಕೆ ಕಡಿವಾಣ ಹಾಕುವ ನಿರ್ಧಾರಕ್ಕೆ ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ   ಬರಲಾಗಿದೆ.

ಈ ಹಿನ್ನೆಲೆಯಲ್ಲಿ ನಾಳೆ (ಸೋಮವಾರ)ಯಿಂದ ಜಾರಿಗೆ ಬರುವಂತೆ ಆಟೋ, ಕ್ಯಾಬ್‌, ಕಾರು, ಬಿಎಂಟಿಸಿ ಬಸ್‌ಗಳ ಓಡಾಟವನ್ನು ರಾತ್ರಿ 8ಗಂಟೆ ನಂತರ ರಸ್ತೆಗೀಲಿಸದಂತೆ  ಸೂಚನೆ ನೀಡಿದೆ.

ಇನ್ನು ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅದರಂತೆ ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ, ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಜುಲೈ 5ರಿಂದ ಭಾನುವಾರ ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಸ್‌, ಟ್ಯಾಕ್ಸಿ ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ.

ಅದರಂತೆ ಸರ್ಕಾರಿ ನೌಕರರೂ ಕೊರೊನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಕಚೇರಿಗಳಲ್ಲಿ ನೌಕರರು ಕೆಲಸ ನಿರ್ವಹಿಸುವಂತೆ ಆದೇಶ ಹೊರಡಿಸಿದ್ದು, ಒಟ್ಟಾರೆಯಾಗಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಸರ್ಕಾರ ಸಹಾಸ ಪಡುತ್ತಿದೆ.

1 Comment

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು