ಬೆಂಗಳೂರು: ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರ ಹಸಮಣೆ ಏರಬೇಕಿದ್ದ ಎರಡು ಜೋಡಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮದುವೆಯನ್ನು ಮುಂದೂಡಲಾಗಿದೆ.
ಬೆಂಗಳೂರಿನಲ್ಲಿ ವಧುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಸ್ಥಳ ಮಂಗಳೂರಿನಲ್ಲಿ ವಧುವಿನ ಹತ್ತಿರದ ಸಂಬಂಧಿಯೊಬ್ಬರಿಗೆ ಕೊರೊನಾ ದೃಢಪಟ್ಟಿದ್ದರಿಂದ ಆ ಮದುವೆಯನ್ನು ಮುಂದೂಡಲಾಗಿದೆ.
ಬೆಂಗಳೂರಿನ ವರನ ಕುಟುಂಬದರು ಶನಿವಾರ ರಾತ್ರಿ ವಧುವಿನ ಮನೆಗೆ ಆರತಕ್ಷತೆಗೆ ಹೋಗುತ್ತಿದ್ದರು. ಈ ವೇಳೆ ಅವರನ್ನು ಮಾರ್ಗ ಮಧ್ಯೆ ತಡೆದು ವಿವಾಹವನ್ನು ನಿಲ್ಲಿಸಲಾಗಿದೆ.
ವಧು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾಳೆ ಆ ವರದಿ ಶನಿವಾರ ಬಂದಿದ್ದು ಆಕೆಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಸದ್ಯ ಯುವತಿ ಸೇರಿ ಆಕೆಯ ಇಡೀ ಕುಟುಂಬವನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇನ್ನು ಮಂಗಳೂರಿನಲ್ಲಿ ನಡೆಯಬೇಕಿದ್ದ ವಿವಾಹವು ಸಂಬಂಧಿಗೆ ಕೊರೊನಾ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ವಧು ಮತ್ತು ಅವರ ಕುಟುಂಬದವರನ್ನು ಕ್ವಾರಂಟೈನ್ ಮಾಡಲಾಗಿದೆ. ವಧುವಿನ ಕುಟುಂಬದವರ ರಕ್ಷ ಮಾದರಿಯನ್ನು ಸಂಗ್ರಹಿಸಿ ಕೋವಿಡ್ ಟೆಸ್ಟ್‌ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.