ಕಲಬುರಗಿ: ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮ ಪರಿಕಲ್ಪನೆಯಡಿ ಗ್ರಾಮಸ್ಥರು ಒಂದು ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ನೀಡಿ ಅದಕ್ಕೆ ಸರಿಸಮನಾಗಿ ಒಂದು ಕೆಜಿ ಸಕ್ಕರೆ ಪಡೆಯಿರಿ ಎಂಬ ಗ್ರಾಮ ಪಂಚಾಯಿತಿಯ ವಿನೂತನ ಯೋಜನೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಚಾಲನೆ ನೀಡಿದರು.
ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿ 18.45 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ವೇಳೆ ಯೋಜನೆಗೆ ಚಾಲನೆ ನೀಡಿದ ಅವರು ಇದು ರಾಜ್ಯದಲ್ಲೇ ಪ್ರಥಮ ಪ್ರಯೋಗವಾಗಿದೆ. ನಿಮ್ಮಮನೆಯಲ್ಲಿ ಸಿಗುವ ಒಂದು ತುಂದ ಪ್ಲಾಸ್ಟಿಕ್ ಅನ್ನು ವೇಸ್ಟ್ ಮಾಡದೆ ಗ್ರಾಮ ಪಂಚಾಯಿತಿ ತಂದು ಕೊಟ್ಟರೆ ಅಷ್ಟೇ ಪ್ರಮಾಣದ ಸಕ್ಕರೆಯನ್ನು ನಿಮಗೆ ಕೊಡಲಾಗುವುದು ಎಂದು ತಿಳಿಸಿದರು.
ಇದೇವೇಳೆ ಕೊರೊನಾ ಮಹಾಮಾರಿ ನಿಯಂತ್ರಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳಾದ ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ, ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಜಿಪಂ ಉಪಾಧ್ಯಕ್ಷೆ ಶೋಭಾ ಸಿರಸಗಿ, ಸದಸ್ಯ ಸಂತೋಷ್ ಪಾಟೀಲ್ ಧನ್ನೂರ, ಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಗದೇವಿ ಪೀರಯ್ಯ ಗುತ್ತೇದಾರ, ಉಪಾಧ್ಯಕ್ಷ ಅರುಣಕುನಾರ ಓಗೆ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ವಿ. ಚಳಕೇರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಕಂಟೆಪ್ಪ, ಪಿಡಿಒ ಅನುಪಮಾ ಎಂ. ಇನ್ನಿತರರು ಉಪಸ್ಥಿತರಿದ್ದರು.
Idanthu deshadalle prathama ansuthe super idu ella jillegu madidre tumbha olleyadu