ಕಲಬುರಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ (78)ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಂಜೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಗದಗದಲ್ಲಿ ಆಯೋಜಿಸಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಗೀತಾ ನಾಗಭೂಷಣ ಅವರು 1942ರ ಮಾರ್ಚ್ 25ರಂದು ಜನಿಸಿದರು. ಎಂ.ಎ. ಪದವಿ ಪಡೆದ ನಂತರ ನಗರದ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು.
ಗೀತಾ ಅವರು 27 ಕಾದಂಬರಿಗಳು, 50 ಸಣ್ಣ ಕಥೆಗಳು, ಮತ್ತು 12 ನಾಟಕಗಳನ್ನು ಬರೆದಿದ್ದಾರೆ. ಅವರ ಸಾಹಿತ್ಯ ಪ್ರತಿಭೆಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಾಡೋಜ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗಳು ಸಂದಿವೆ.
Rip amma