NEWSನಮ್ಮರಾಜ್ಯ

ಇನ್ನೆರಡು ತಿಂಗಳಲ್ಲಿ ಕೊರೊನಾ ಸೋಂಕು ಏರಿಕೆ : ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಸಚಿವ ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ತಂಡಕ್ಕೆ ಇನ್ನಷ್ಟು ತಜ್ಞ ವೈದ್ಯರ ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಜ್ಞರ ಸಮಿತಿ ವರದಿ ಪ್ರಕಾರ, ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಜುಲೈ ಮತ್ತು ಆಗಸ್ಟ್ ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಲಿದೆ ಎಂದು ಹೇಳಿದರು.

ಇನ್ನು ಇತ್ತೀಚೆಗೆ ಕೇವಲ ಪರೀಕ್ಷೆಯ ಪ್ರಮಾಣ ಮಾತ್ರ ಹೆಚ್ಚಾಗಿಲ್ಲ, ಸೋಂಕಿತರು ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಸಚಿವರು ಒಪ್ಪಿಕೊಂಡಿದ್ದಾರೆ.

ರಾಜ್ಯದಲ್ಲಿ ವೈರಾಣು ಸೋಂಕು ಪರಿಸ್ಥಿತಿ ಇನ್ನೂ ಆರು ತಿಂಗಳು ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಹಾಗೂ ರಾಜ್ಯದಲ್ಲಿ ಹರಡುತ್ತಿರುವ ಕೊರೋನಾ ವೈರಾಣು ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಜುಲೈ 7ರ ನಂತರ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಚಿಂತನೆ ಇದೆ ಎಂದು ತಿಳಿಸಿದರು..

ಇನ್ನು ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ದಾಖಲಾಗಲು ಆಗಮಿಸಿದರೆ ಪ್ರವೇಶ ನಿರಾಕರಿಸಬಾರದು, ಸೋಂಕು ಪತ್ತೆ ಪರೀಕ್ಷೆ ವರದಿಯನ್ನು ಮೊದಲು ಸರ್ಕಾರಕ್ಕೆ ತಿಳಿಸಬೇಕು. ಬೇರಾರಿಗೂ ಮಾಹಿತಿ ಬಹಿರಂಗಪಡಿಸಬಾರದು. ಸರ್ಕಾರದ ಆರೋಗ್ಯಾಧಿಕಾರಿ ಮಾಹಿತಿ ಬಿಡುಗಡೆ ಮಾಡಲಿದ್ದಾರೆ ಎಂದು ವಿವರಿಸಿದರು.

ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಇಲ್ಲ.ಬೆಂಗಳೂರು ನಗರದ ಉದ್ಯಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ತರುವ ಆಲೋಚನೆ ಇದೆ ಎಂದು   ಅಶೋಕ ತಿಳಿಸಿದರು.

ಕೆಲವು ಕಡೆ ಹೋಟೆಲ್‌ಗಳಲ್ಲಿ ವೈದ್ಯರ ಮೇಲೆ ಗಲಾಟೆ ಮಾಡಿದ್ದಾರೆ. ಗೃಹ ಸಚಿವರ ಜತೆ ಮಾತನಾಡಿ ವೈದ್ಯರಿಗೆ ಸೂಕ್ತ ರಕ್ಷಣೆ ಕೊಡಬೇಕು ಮುಂದೆ ಇಂತಹ ಪ್ರಕರಣ ವರದಿಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಲಾಗಿದೆ ಎಂದರು.

ಈಗಿನ ಪರಿಸ್ಥಿತಿಯಲ್ಲಿ ವೈದ್ಯರ ಅಗತ್ಯ ಕೂಡ ಹೆಚ್ಚಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಗಳನ್ನು ನೇಮಿಸುವಂತೆ ಸೂಚಿಸಲಾಗಿದೆ ಎಂದ ಅವರು, ಅವ್ಯವಸ್ಥೆಯ ದೂರು ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ, ಹಜ್ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ವೈದ್ಯಕೀಯ ಸಿಬ್ಬಂದಿ ಆರು ತಿಂಗಳು ಕೆಲಸ ಮಾಡಲು ಮಾನಸಿಕವಾಗಿ ಸಿದ್ಧವಾಗಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಡಾಕ್ಟರ್‌ಗಳು ವಾರ್ಡ್ ಗಳಿಗೆ ಹೋಗುವುದಿಲ್ಲ ಅಂತ ದೂರು ಬಂದಿದೆ. ಪ್ಯಾರಾಮೆಡಿಕಲ್ ಸ್ಟಿಕರ್ ಗಳನ್ನು ಹಾಕಿಕೊಂಡು ಹೋಗಬೇಕು. ಕೆಲವು ಕಡೆ ಹೋಟೆಲ್ ಗಳಲ್ಲಿ ವೈದ್ಯರ ಮೇಲೆ ಗಲಾಟೆ ಮಾಡಿದ್ದಾರೆ. ವಿಕ್ಟೋರಿಯಾದಲ್ಲಿ ಎಲ್ಲಾ ಬೆಡ್ ಗಳಿಗೆ ನಂಬರಿಂಗ್ ಮಾಡಲಾಗಿದೆ ಎಂದು ತಿಳಿಸಿದರು.

ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ