ಬಾಗಲಕೋಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲ್ವಿಚಾರಕಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಜತೆ ಕೆಲಸ ಮಾಡಿದ 20 ಸಿಬ್ಬಂದಿ ಸೇರಿ 80 ಮಂದಿಯಲ್ಲಿ ಆತಂಕ ಏದುರಾಗಿದೆ.
ಜೂನ್ 25-27ರಂದು ಬಾಗಲಕೋಟೆಯ ನವನಗರದ ಎಸ್ಸೆಸ್ಸೆಲ್ಸಿ ಬಾಹ್ಯ ಪರೀಕ್ಷೆ ಕೇಂದ್ರದ ಮೇಲ್ವಿಚಾರಕಿಯಾಗಿ ಕೆಲಸ ಮಾಡಿದ್ದರು. ಅವರು ಬಸ್‌ನಲ್ಲಿ ಪ್ರಯಾಣಿಸಿದ್ದು, ಜ್ವರ ಮತ್ತು ತಲೆನೋವು ಕಾಣಿಕೊಂಡಿದೆ. ಹೀಗಾಗಿ ಅವರನ್ನು ಕೋವಿಡ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈಗ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ. ಸದ್ಯ 20 ಮಂದಿ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಬೇರೆ 20 ಸಿಬ್ಬಂದಿಯನ್ನು ನೇಮಿಸಲಾಗಿದೆ.