ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಜುಲೈ 2ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಅಂದಿನ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿ ಎಂದು ಮಾಜಿ ಸಚಿವ ರಾಜಶೇಖರ್ ಬಿ. ಪಾಟೀಲ್ ಕರೆ ನೀಡಿದ್ದಾರೆ.
ಕೆಪಿಸಿಸಿ ವತಿಯಿಂದ ಇದೇ ಜುಲೈ 2 ರಂದು ಹಮ್ಮಿಕೊಳ್ಳಲಾಗಿರುವ ಐತಿಹಾಸಿಕ “ಪ್ರತಿಜ್ಞಾ ದಿನʼʼವನ್ನು ಪಕ್ಷದ ಎಲ್ಲರೂ ಸಂಭ್ರಮಿಸಬೇಕು ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.