NEWSನಮ್ಮರಾಜ್ಯರಾಜಕೀಯ

ಕೊರೊನಾ ಚಿಕಿತ್ಸೆ ಬಗ್ಗೆ ನಿಗಾ ಇಡಲು  ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಿ

ಸಿಎಂ ಯಡಿಯೂರಪ್ಪಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌  ಮಾಡಿರುವ ಅವರು, ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆ ಸಿಎಂ  ಬಿಎಸ್‌ವೈ ಅವರೇ ಗಮನ ಹರಿಸಿ ಎಂದು ಒತ್ತಾಯಿಸಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧ, ‌ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ ಎಂದು ಆರೋಪಿಸಿರುವ ಅವರು  ಇದು ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದ  ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು