Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಕೊಳ್ಳೇಗಾಲ ಕಾಂಗ್ರೆಸ್‌: ಡೆಮೋ ಮೀಟಿಂಗ್ ಯಶಸ್ವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೊಳ್ಳೇಗಾಲ: ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ವೆಂಕಟೇಶ್ವರ ಮಹಲ್ ನಲ್ಲಿ ಬ್ಲಾಕ್ ವ್ಯಾಪ್ತಿಯ  ಪ್ರತಿ ಪಂಚಾಯ್ತಿಯಲ್ಲಿನ ಉಸ್ತುವಾರಿಗಳಿಗೆ ಹಾಗೂ ಡಿಜಿಟಲ್ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕಾರ್ಯಾಗಾರದಲ್ಲಿ Zoom App ಹಾಗೂ ಸೋಶಿಯಲ್ ಮೀಡಿಯಾದ ಬಗ್ಗೆ ತರಬೇತಿ ನೀಡಲಾಯಿತು. ನಂತರ ಜುಲೈ 2ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಆಯಾ ಪಂಚಾಯ್ತಿ ಸ್ಥಳಗಳಲ್ಲೇ ಕುಳಿತು ZOOM APP ಮೂಲಕ ಭಾಗವಹಿಸುವ ಬಗ್ಗೆ ಡೆಮೋ ತೋರಿಸಲಾಯಿತು.

ಇದಕ್ಕೆ ನೇರವಾಗಿ ಕೆಪಿಸಿಸಿ ಕಚೇರಿಯಿಂದಲೇ ನಮ್ಮನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ವಕ್ತಾರರಾದ ಆರ್.ಧ್ರುವನಾರಾಯಣ್, ಕಾರ್ಯದರ್ಶಿಗಳಾದ ಎ.ಎನ್ ನಟರಾಜ್ ಗೌಡ, ಹಾಗೂ ವನಿತಾ ಅವರು ಎಲ್ಲಾ ಉಸ್ತುವಾರಿಗಳಿಗೆ ಹಾಗೂ ಡಿಜಿಟಲ್ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದ ನೇತೃತ್ವವನ್ನು  ಶಾಸಕರಾದ ಎಸ್ ಜಯಣ್ಣ, ಎಸ್. ಬಾಲರಾಜ್ ವಹಿಸಿದ್ದರು.  ಡಿಸಿಸಿ ಅಧ್ಯಕ್ಷ  ಪಿ.ಮರಿಸ್ವಾಮಿ, ಕೆಪಿಸಿಸಿಯಿಂದ ಉಸ್ತುವಾರಿಗಳಾಗಿ ಆಗಮಿಸಿದ  ಗಂಗಾಧರ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೊಟೇಶ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ,  ಕೆಪಿಸಿಸಿ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸತೀಶ್, ಯುತ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್,  ಮುಖಂಡರಾದ ಶಾಂತರಾಜು, ರಾಜೇಂದ್ರ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಯೋಜಕ ಮಹದೇವಸ್ವಾಮಿ ಎನ್ ಹೊಂಗನೂರು, ಜಿ.ಪಂ, ತಾ.ಪಂ, ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

1 Comment

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...