ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬುಧವಾರ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಪರೀಕ್ಷಾ ಕೇಮದ್ರದಿಂದಲೇ ಆಕೆಯನ್ನು ಕೋವಿಡ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಮೂರು ದಿನದ ಹೀಂದೆಯೇ ವಿದ್ಯಾರ್ಥಿನಿಗೆ ಜ್ವರ ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲಿ ಆಕೆಯ ಗಂಟಲು ದ್ರವ ಮತ್ತು ರಕ್ತವನ್ನು ಕೋವಿಡ್ ಪರೀಕ್ಷೆಗ ಕಳುಹಿಸಿ ಆಕೆಗೆ ಪ್ರತ್ಯೇಕ ಕೊಠಡಿಯಲ್ಲಿಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿತ್ತು.
ಇನ್ನು ಇಂದು ಕೋವಿಡ್ ಟೆಸ್ಟ್ ಪಾಸಿಟಿವ್ ಬಂದಿದ್ದರಿಂದ ಪರೀಕ್ಷಾ ಕೇಂದ್ರಕ್ಕೆ ಆಂಬುಲೆನ್ಸ್ ಕಳುಹಿಸಿ ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಮುಂದಿನ ಪರೀಕ್ಷೆ ಸಮಯದಲ್ಲಿ ಪರೀಕ್ಷೆ ಬರೆಯುವಂತಿ ತಿಳಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದರು.
ಉಡುಪಿಯ ವಿದ್ಯಾರ್ಥಿಗೂ ಕೊರೊನಾ
ಉಡುಪಿ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಆಗಿದ್ದು ಆತನನ್ನು ಕೂಡ ಕೋವಿಡ್ ಆಸ್ಪತ್ರೆಗೆ ಇಂದು ದಾಖಲಿಸಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಈ ವಿದ್ಯಾರ್ಥಿಯೂ ಕೂಡ ಇಂದು ಪರೀಕ್ಷೆ ಬರೆಯಲು ಸಿದ್ಧನಾಗಿದ್ದ ಅಷ್ಟರಲ್ಲಿ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ತಿಳಿದು ಮನೆಯಲ್ಲೇ ಇದ್ದ. ಕೋರೊನಾ ವಾರಿಯರ್ಸ್ ಬಂದು ವಿದ್ಯಾರ್ಥಿಯನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ವಾಮಿಟ್ ಮಾಡಿಕೊಂಡ ವಿದ್ಯಾರ್ಥಿ
ಬೆಂಗಳೂರಿನ ಮಲ್ಲೇಶ್ವರದ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಇಂದು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿ ನಿಶಕ್ತಿಗೊಂಡು ವಾಮಿಟ್ ಮಾಡಿಕೊಂಡು ಕುಸಿದು ಬಿದ್ದಿದ್ದ. ಈ ವೇಳೆ ಆತನ ಪಾಲಕರನ್ನು ಕರೆಸಿಕೊಂಡು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಇದರಿಂದ ವಿದ್ಯಾರ್ಥಗಳು ಮತ್ತು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಲ್ಲಿ ಆಂತಕ ಉಂಟಾಗಿದೆ. ಆದರೂ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ.