NEWSನಮ್ಮರಾಜ್ಯ

ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಮಾನವೀಯತೆ ಮರೆತ 6ಮಂದಿ ಸಸ್ಪೆಂಡ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಮಂಗಳವಾರ ಮೃತಪಟ್ಟಿದ್ದ ಆರು ಮಂದಿಯ ಅಂತ್ಯ ಕ್ರಿಯೆಯನ್ನು ಅಮಾನುಷವಾಗಿ ಮಾಡಿದ ಘಟನೆಗೆ ಸಂಬಂಧಿಸಿದಂತೆ 6 ಮಂದಿ ನೌಕರರನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧಲ್ಲಿ ಮಾತನಾಡಿದ ಅವರು, ನಾವು ಇಂಥ ಅಮಾನವೀಯ ನಡೆಯನ್ನು ಖಂಡಿಸುತ್ತೇವೆ. ಮುಂದೆ ಈರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ನೀಡುವ ಸಲುವಾಗಿ 6ಮಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಹೇಳಿದರು.

ಈ ವೇಳೆ ಉಪಸ್ಥಿತರಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌, ಬಳ್ಳಾರಿಯ ಜಿಲ್ಲಾಧಿಕಾರಿ ನೌಕರರು ಅಂತ್ಯಕ್ರಿಯೆ ವೇಳೆ ನಡೆದುಕೊಂಡಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಬೇಸರತ್‌ ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದರು.

ಇನ್ನು ಮುಂದೆ ಇಂಥ ಘಟನೆ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಇನ್ನು ದಾವಣಗೆರೆ ಮತ್ತು ಯಾದಗಿರಿಯಲ್ಲೂ ಈರೀತಿ ನಡೆದುಕೊಂಡಿದ್ದು ಅವರ ವಿರುದ್ಧವು ಕ್ರಮ ಜರುಗಿಸುವ ಬಗ್ಗೆ ಸಚಿವರು ತಿಳಿಸಿದ್ದಾರೆ.

 

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ