ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 889 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,502 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 18,016ಕ್ಕೆ ಏರಿಕೆಯಾಗಿದೆ.
ಇಂದು 19 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 276ಕ್ಕೆ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಏರಿಕೆಯಾಗಿದೆ. ಇನ್ನು ಐಸಿಯುನಲ್ಲಿ 161 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 18,016ರಲ್ಲಿ 9,406 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇಂದು ರಾಜ್ಯದಲ್ಲಿ 19 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳ ತಲಾ 4, ಚಿತ್ರದುರ್ಗ 3, ಗದಗ 2, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿದೆ.