NEWSದೇಶ-ವಿದೇಶನಮ್ಮರಾಜ್ಯಶಿಕ್ಷಣ-

ನೀಟ್, ಜೆಇಇ ಪರೀಕ್ಷೆ ಸೆಪ್ಟೆಂಬರ್‌ಗೆ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಚ್‌ಆರ್‌ಡಿ ಸಚಿವಾಲಯ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ(ನೀಟ್ ಮತ್ತು ಜೆಇಇ)ಯನ್ನು ಸೆಪ್ಟೆಂಬರ್‌ಗೆ ಮುಂದೂಡಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ನೀಟ್ ಪರೀಕ್ಷೆ ಜುಲೈ 26 ಹಾಗೂ ಜೆಇಇ ಪರೀಕ್ಷೆಗಳು ಜುಲೈ 18 ರಿಂದ 23 ರವರೆಗೆ ನಿಗದಿಯಾಗಿದ್ದವು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರವೇಶಕ್ಕಾಗಿ ನಡೆಸಲಾಗುವ ಜೆಇಇ-ಅಡ್ವಾನ್ಸ್ಡ್ ಅನ್ನು ಆಗಸ್ಟ್ 23 ರಂದು ನಿಗದಿಯಾಗಿತ್ತು.

ಈಗ ಜೆಇಇ-ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1-6ರ ನಡುವೆ ನಡೆಯಲಿದ್ದು, ಜೆಇಇ-ಅಡ್ವಾನ್ಸ್ ಪರೀಕ್ಷೆ ಸೆಪ್ಟೆಂಬರ್ 27 ರಂದು ನಡೆಯಲಿದೆ. ನೀಟ್ ಪರೀಕ್ಷೆ ಸೆಪ್ಟೆಂಬರ್ 13 ರಂದು ನಡೆಯಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಹಾಂಕ್ ಹೇಳಿದರು.

 

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...