ಹಾಸನ : ಜಿಲ್ಲೆಯಲ್ಲಿ ಮತ್ತೊಂದು ಕೊರೊನಾಗೆ ಸಾವು ಸಂಭವಿಸಿದೆ. ಹೊಳೆನರಸೀಪುರದಲ್ಲಿ ಬೇಕರಿ ಇಟ್ಟುಕೊಂಡಿದ್ದ ಬೇಲೂರು ತಾಲೂಕಿನ 38 ವರ್ಷದ ವ್ಯಕ್ತಿ ನಿನ್ನೆ ತಮ್ಮ ಸ್ವ ಗೃಹದಲ್ಲಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕರೊನಾ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ
ನಂತರ ಅವರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದ್ದು, ಇಂದು ವರದಿ ಪಾಸಿಟಿವ್ ಎಂದು ಬಂದಿದೆ .
ಮೃತ ದೇಹವನ್ನು ತಾಲೂಕು ನೋಡಲ್ ಅಧಿಕಾರಿ ಡಾ. ನರಸೇಗೌಡ ಅವರ ಮಾರ್ಗ ದರ್ಶನದಲ್ಲಿ ಸರ್ಕಾರಿ ನಿಯಮಾನುಸಾರ ಸುರಕ್ಷತಾ ಕ್ರಮಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.