NEWSನಮ್ಮಜಿಲ್ಲೆನಮ್ಮರಾಜ್ಯ

ಬಳ್ಳಾರಿ: ವಿಮ್ಸ್‌ನಲ್ಲಿ ವೈದ್ಯರು ಸೇರಿ 19 ಜನರಿಗೆ ಕೊರೊನಾ

ಇಡೀ ವಿಮ್ಸ್‌ಗೆ ಸೋಂಕುನಿವಾರಕ ಔಷಧ ಸಿಂಪಡಣೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರೋಗ್ಯ ಸೇವೆ ಸೌಲಭ್ಯ ಒದಗಿಸುತ್ತಿರುವ ವೈದ್ಯರು, ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಪಿಜಿ ವಿದ್ಯಾರ್ಥಿಗಳು ಸೇರಿದಂತೆ 19 ಜನರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ಮೇರೆಗೆ ವಿಮ್ಸ್‌ನ ಇಡೀ ಆವರಣದಲ್ಲಿ ಹಾಗೂ ಒಳಗಡೆ ಸಂಪೂರ್ಣ ಸೋಂಕು ನಿವಾರಕ ಔಷಧ ಸಿಂಪಡಣೆ ಕಾರ್ಯ ಶನಿವಾರ ನಡೆಯಿತು.

ಶನಿವಾರ ಬೆಳಗ್ಗೆಯಿಂದಲೇ ವಿಮ್ಸ್‌ನಲ್ಲಿ ಸೋಂಕುನಿವಾರಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ.  20 ಜನರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದ್ದು, 60 ಜನರನ್ನು ಪ್ರಥಮ ಸಂಪರ್ಕಿತರೆಂದು ಗುರುತಿಸಲಾಗಿದೆ ಎಂದು ವಿಮ್ಸ್ ನಿರ್ದೇಶಕ ಡಾ.ದೇವಾನಂದ ತಿಳಿಸಿದ್ದಾರೆ.

ವಿಮ್ಸ್‌ಗೆ ಆರೋಗ್ಯ ಸೇವೆ ಪಡೆಯಲು ಆಗಮಿಸುತ್ತಿರುವ ತೀವ್ರ ಉಸಿರಾಟದ ಸಮಸ್ಯೆ, ಲಘುಶೀತ ಜ್ವರ(ಐಎಲ್‌ಐ)ದಂತವರ ಮೂಲಕ ಆರೋಗ್ಯ ಸೇವೆ ಒದಗಿಸುತ್ತಿರುವವರಿಗೆ ಈ ಸೊಂಕು ಹರಡಿದೆ; ಈ ಹಿನ್ನೆಲೆಯಲ್ಲಿ ವಿಮ್ಸ್ನಲ್ಲಿ ಸೊಂಕು ಹರಡಬಾರದು ಎಂಬ ಉದ್ದೇಶದಿಂದ ಸೊಂಕುನಿವಾರಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ.

ಜು.10ರೊಳಗೆ ಟ್ರಾಮಾಕೇರ್ ರೆಡಿ ಮಾಡಿ
ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಕೊರತೆ ಕಾಡುತ್ತಿದ್ದು,ಈ ಹಿನ್ನೆಲೆಯಲ್ಲಿ ಟ್ರಾಮಾಕೇರ್ ಸೆಂಟರ್‌ನಲ್ಲಿ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಜು.10ರೊಳಗೆ ಕಲ್ಪಿಸಿ,ಒದಗಿಸುವುದಕ್ಕೆ ಮುಂದಾಗಬೇಕು ಎಂದು ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು.

ಟ್ರಾಮಾಕೇರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಇನ್ನೂ ಒಂದು ವಾರದೊಳಗೆ ಒದಗಿಸುವದಕ್ಕೆ ಮುಂದಾಗಬೇಕು. ನಿಗದಿಪಡಿಸಿದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಕೆ.ನಿತೀಶ್,ವಿಮ್ಸ್ ನಿರ್ದೇಶಕ ಡಾ.ದೇವಾನಂದ, ವಿಮ್ಸ್ ಅಧೀಕ್ಷಕ ಡಾ.ಮರಿರಾಜ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...