NEWSಆರೋಗ್ಯನಮ್ಮಜಿಲ್ಲೆರಾಜಕೀಯ

ದಾವಣಗೆರೆ: 21 ಕೋಟಿ ರೂ. ವೆಚ್ಚದಲ್ಲಿ , ಮಕ್ಕಳ ಆಸ್ಪತ್ರೆಗೆ ಶಂಕು

ವೈದ್ಯರು-ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೂ ಚಾಲನೆ l ಆರೋಗ್ಯ ಸಚಿವ  ಬಿ.ಶ್ರೀರಾಮಲು

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಇಂದು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಸಾಮಥ್ರ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ಇವರ ವತಿಯಿಂದ ಜು.4 ರಂದು ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದರು.

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದ ಜಿ.ಎಂ.ಸಿದ್ದೇಶ್ವರ್ ಇವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ. ಈ ಆಸ್ಪತ್ರೆಯ ಕಾಮಗಾರಿಯನ್ನು ನಿಗದಿತ ಅವಧಿ ಅಂದರೆ 15 ತಿಂಗಳ ಒಳಗೆ ಮುಗಿಸಿ ನಂತರ ಸಂಸದರು, ಉಸ್ತುವಾರಿ ಸಚಿವರು, ಶಾಸಕರೆಲ್ಲ ಸೇರಿ ಉದ್ಘಾಟನೆಯನ್ನು ಸಹ ನೆರವೇರಿಸುವೆವು ಎಂದ ಅವರು ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಇಳಿಮುಖವಾಗಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ. ಪ್ರಶಂಸನೀಯವಾಗಿ ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ದರಿದ್ದೇವೆ. ಶ್ವೇತ ಪತ್ರ ಹೊರಡಿಸಿದರೂ ಸಿದ್ದರಾಗಿದ್ದೇವೆ. ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ಸಹ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು ಎಂದ ಅವರು ಕೋವಿಡ್ ನಿರ್ವಹಣೆ ವಿಷಯವಾಗಿ ವಿಶ್ವವೇ ಭಾರತದ ಕೆಲಸವನ್ನು ಶ್ಲಾಘಿಸುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಇಂದು ಜಿಲ್ಲಾಸ್ಪತ್ರೆ ಆವರಣದಲ್ಲಿ ಸಚಿವರು ಸಂಸದರು, ಶಾಸಕರು ಸೇರಿದಂತೆ ಎಲ್ಲರ ಸಹಯೋಗದೊಂದಿಗೆ ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸುಮಾರು 21 ಕೋಟಿ ರೂ. ಅನುದಾನದಲ್ಲಿ ಈ ಕಟ್ಟಡವನ್ನು ಮತ್ತು ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಿಸುತ್ತಿದ್ದು, ಇನ್ನು 15 ತಿಂಗಳಲ್ಲಿ ಈ ಕಾಮಗಾರಿಗಳನ್ನು ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಕೋವಿಡ್‍ನಿಂದ ಸಂಭಿಸುತ್ತಿರುವ ಸಾವುಗಳನ್ನು ನಿಯಂತ್ರಿಸಲು ನಾವು ವಿಫಲರಾಗಿಲ್ಲ. ಅತ್ಯಂತ ಅಚ್ಚುಕಟ್ಟಾಗಿ ಮತ್ತು ಸಮರ್ಪಕವಾಗಿ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಲಾಗುತ್ತಿದೆ. ಕೇಂದ್ರ ಸರ್ಕಾರವೂ ಸಹ ರಾಜ್ಯ ಕೈಗೊಂಡಿರುವ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಆದರೆ ಲಾಕ್‍ಡೌನ್ ಸಡಿಲಿಕೆ ನಂತರ ಮಹಾರಾಷ್ಟ್ರ, ಗುಜರಾತ್‌,  ತಮಿಳುನಾಡಿನಿಂದ ಬಂದವರಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಸಮಸ್ಯೆ ಉಂಟಾಗಿದ್ದು ಅದನ್ನು ಸಹ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದರು.

ಆಡಳಿತ ಮಂಡಳಿ ಶಿಷ್ಯವೇತನ ನೀಡಲಿದೆ
ಶಿಷ್ಯವೇತನ(ಸ್ಟೈಫಂಡ್)ಬಾರದಿದ್ದಕ್ಕಾಗಿ ಧರಣಿ ಕುಳಿತಿರುವ ಜೆಜೆಎಂ ಮೆಡಿಕಲ್ ಕಾಲೇಜಿನ ಗೃಹವೈದ್ಯರನ್ನು ಭೇಟಿ ಮಾಡಿ ಧರಣಿ ನಿರತರಿಗೆ ಸಾಂತ್ವನ ಹೇಳುತ್ತೇವೆ. ನಿನ್ನೆ ಇವರ ಶಿಷ್ಯವೇತನ ಕುರಿತು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಸ್ಥಳೀಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಇವರ ಸಮ್ಮುಖದಲ್ಲಿ ನಾವು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಇಡೀ ರಾಜ್ಯಕ್ಕೆ ಒಂದು ಸ್ಥಿತಿ ಇದೆ. ಆದರೆ ಜೆಜೆಎಂನಲ್ಲಿ ಒಂದು ಸ್ಥಿತಿ ಇದ್ದು, ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯವೇತನ ಭರಿಸಬೇಕೆಂದು ಮುಖ್ಯಮಂತ್ರಿಗಳು ತಿಳಿಸಿರುವ ಪ್ರಕಾರ ಆಡಳಿತ ಮಂಡಳಿಯವರು ಒಪ್ಪಿಕೊಂಡಿದೆ. ಸೋಮವಾರದ ನಂತರ ಗೃಹವೈದ್ಯರಿಗೆ ಶಿಷ್ಯವೇತನವನ್ನು ಶೀಘ್ರವಾಗಿ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...