ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 1172 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,836 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ.
ಇಂದು 42 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 339ಕ್ಕೆ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಏರಿಕೆಯಾಗಿದೆ. ಇನ್ನು ಐಸಿಯುನಲ್ಲಿ 226 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 21,549 ರಲ್ಲಿ 11966 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 439 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ ಒಟ್ಟು 9244 ಮಂದಿ ಈವರೆಗೆ ಗುಣಮುಖರಾಗಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇಂದು ರಾಜ್ಯದಲ್ಲಿ 42 ಮಂದಿ ಅದರಲ್ಲಿ ಬೆಂಗಳೂರಿನಲ್ಲಿ 24 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಬೀದರ್ 6, ದಕ್ಷಿಣ ಕನ್ನಡ 4, ಕಲಬುರಗಿ 3, ಧಾರವಾಡ 2, ಹಾಸನ, ಬೆಂಗಳೂರು ಗ್ರಾಮಾಂತರ ತಲಾ ಒಬ್ಬರು ಬಲಿಯಾಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 1172, ದಕ್ಷಿಣ ಕನ್ನಡ 75, ಬಳ್ಳಾರಿ 73, ಬೀದರ್ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರ್ಗಿ ಮತ್ತು ವಿಜಯಪುರದಲ್ಲಿ ತಲಾ 37, ಮಂಡ್ಯ ಮತ್ತು ಉತ್ತರ ಕನ್ನಡದಲ್ಲಿ ತಲಾ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ತಲಾ 12, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿ ತಲಾ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ ಮತ್ತು ಚಿಕ್ಕಮಗಳೂರು ತಲಾ 3, ರಾಮನಗರ 2, ಯಾದಗಿರಿಯಲ್ಲಿ 1 ಪ್ರಕರಣ ದೃಢಪಟ್ಟಿದೆ.