NEWSನಮ್ಮಜಿಲ್ಲೆನಮ್ಮರಾಜ್ಯ

ಒಳ ಮೀಸಲಾತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಸಿಎಂ, ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು ಎಂದು ಹೇಳಿದರು.

ಇನ್ನು ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವರಾದ ಡಾ.ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ