ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದೆ. ಅರಸೀಕೆರೆಯ 77 ವರ್ಷದ ವೃದ್ದರೊಬ್ಬರು ಕಳೆದ ರಾತ್ರಿ 11.45ರಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ
ನಿಮೊನಿಯಾ ಹಾಗೂ ರಕ್ತದ ಒತ್ತಡ ಮತ್ತಿತರ ಸಮಸ್ಯೆ ಗಳಿಂದ ಬಳಲುತ್ತಿದ್ದ ಸೋಂಕಿತರನ್ನು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.