NEWSಆರೋಗ್ಯಉದ್ಯೋಗನಮ್ಮರಾಜ್ಯ

ಜುಲೈ 10ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 10ರಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತರು ನಿರ್ಧರಿಸಿದ್ದಾರೆ.

ಪ್ರಸ್ತುತ ಕೊಡುತ್ತಿರುವ 10 ಸಾವಿರ ರೂಪಾಯಿಯಿಂದ ನಿತ್ಯ ಜೀವನ ನಿರ್ವಹಣೆ ಸೇರಿ ಮಕ್ಕಳನ್ನು ಓದಿಸುವುದು ಕಷ್ಟವಾಗುತ್ತಿದೆ ಆದ್ದರಿಂದ  ಮಾಸಿಕ ಗೌರವ ಧನವನ್ನು 12 ಸಾವಿರ ರೂ.ಗಳಿಗೆ ನಿಗದಿಪಡಿಸಬೇಕೆಂದು ಆಗ್ರಹಿಸಿ  10 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು  ಮುಂದಾಗಿರುವುದಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಸೋಮವಾರ ಪತ್ರಿಕಾ ಭವನದಲ್ಲಿ ಯೋಜಿಸಿದ್ದ ಸುದ್ದಿಗೋಷ್ಠೀಯಲ್ಲಿ ತಿಳಿಸಿದರು.

ಕೊರೊನಾ ಸಂಕಷ್ಟದ ಕಾಲದಲ್ಲಿ ಅದರ ನಿಯಂತ್ರಣಕ್ಕೆ ಹಗಲಿರುಳು‌ ಕಾರ್ಯನಿರ್ವಹಿಸುವ   ಕಾರ್ಯವನ್ನು ಕೇಂದ್ರ ಸರ್ಕಾರವೂ ಸ್ಮರಿಸಿದೆ. ಮುಖ್ಯ‌ಮಂತ್ರಿಗಳ‌ ಆದಿಯಾಗಿ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಸಹ ಪ್ರಶಂಸಿದ್ದಾರೆ. ಆದರೆ ಇದರಿಂದ  ನಮ್ಮ ಬದುಕು ಹಸನಾಗಲ್ಲ. ಕೋವಿಡ್ ಕಾಲದಲ್ಲಿ ಕೇಂದ್ರ ಸರಕಾರ ನೀಡುತ್ತಿರುವ ಮಾಸಿಕ 2 ಸಾವಿರ ಪ್ರೋತ್ಸಾಹ ಧನ‌ ಕಳೆದ ಮೂರು ತಿಂಗಳಿನಿಂದ ಬಂದಿಲ್ಲ. ರಾಜ್ಯ ಸರ್ಕಾರ ಒಂದು ತಿಂಗಳಿನಿಂದ ಕೊಟ್ಟಿಲ್ಲ ಎಂದು ವಿವರಿಸಿದರು.

ಕೋವಿಡ್ ದಿನೇದಿನೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇದು ಸಕಾರಣವಲ್ಲವಾದರೂ ಅನಿವಾರ್ಯವಾಗಿ ಸರಕಾರ ನಮ್ಮ ಬಗ್ಗೆ ಚಿಂತಿಸಿ ಗೌರವ ಧನ‌ ಹೆಚ್ಚಳ ಮಾಡಲಿ ಎಂಬ‌ ಕಾರಣಕ್ಕೆ ಮುಷ್ಕರಕ್ಕೆ ನಿರ್ಧರಿಸಲಾಗಿದೆ ಎಂದರು.

ಕೋವಿಡ್ ಕಾಲದಲ್ಲಿ ಕೆಲಸ ಮಾಡಿದ್ದಕ್ಕೆ ರಾಜ್ಯ ಸರಕಾರ ರಾಜ್ಯದಲ್ಲಿನ 42 ಸಾವಿರ ಆಶಾಗಳಿಗೆ ತಲಾ ಮೂರು ಸಾವಿರ ರೂ. ಪ್ರೋತ್ಸಾಹ ಧನ‌ ನೀಡುವುದಾಗಿ ಹೇಳಿ, ಎಲ್ಲಾ ಜಿಲ್ಲೆಗಳಲ್ಲಿ‌ ಸಾಂಕೇತಿಕವಾಗಿ ಸಹಕಾರ ಸಚಿವರು ನೀಡಿದ್ದಾರೆ. ಇದು ಶೇ. 40 ರಷ್ಟು ದಾಟಿಲ್ಲ. ಇನ್ನೂ 25 ಸಾವಿರ ಆಶಾಗಳಿಗೆ ಬಂದಿಲ್ಲ ಎಂದು ಗಂಭೀರ ಆರೋಪವನ್ನು ಮಾಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...