NEWSನಮ್ಮರಾಜ್ಯ

ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಎಕ್ಸ್‌ ಮಾಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ RamalingaReddy For CM ಎಂದು ಕೆಲವರು ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು ಎಂದು ತಿಳಿಸಿದ್ದಾರೆ.

ಅಲ್ಲದೆ ಪಕ್ಷ ಮತ್ತು ನಾಡಿನ ಜನತೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದರತ್ತ ಮಾತ್ರ ನನ್ನ ಗಮನವಿದೆ. ಆದ್ದರಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಯಾರೂ ಇಂತಹ ಗೊಂದಲಕಾರಿ ಪ್ರಚಾರಕ್ಕೆ ಕಿವಿಗೊಡಬಾರದು ಮತ್ತು ಇದರಲ್ಲಿ ಭಾಗಿಯಾಗಬಾರದು ಎಂದು ಕೋರಿದ್ದಾರೆ.

ಇನ್ನು ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...