
ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಿಸಬೇಕು ಎಂದುಕೊಂಡಿರುವ ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.
ಇನ್ನು ಈ ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು ಎಂದು ಪ್ರಶ್ನಿಸಿದ್ದಾರೆ.
ನೋಡಿ ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ. ಟನಲ್ ಯೋಜನೆಯನ್ನು ಕಾರು, ಬಸ್, ದ್ವಿಚಕ್ರ ವಾಹನ ಸವಾರರು ಹೀಗೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದರು.
Related









