ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೊನಾಗೆ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 9 ಕ್ಕೆ ಏರಿದೆ.
ಹಾಸನ ತಾಲೂಕಿನ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಜು. 4 ರಂದು ಕೋವಿಡ್ ಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ಶಂಕೆಯಿಂದ ಐ.ಸಿ.ಯು ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚೇತರಿಕೆ ಕಾಣದ ಕಾರಣ ವೆಂಟಿಲೇಶನ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಕೊನೆ ಉಸಿರೆಳೆದಿದ್ದಾರೆ .
ಇವರ ಗಂಟಲು ಮತ್ತು ಮೂಗಿನ ದ್ರವ ಮಾದರಿ ಪರೀಕ್ಷೆ ವರದಿ ಪಾಸಿಟಿವ್ ಎಂದು ಬಂದಿದೆ. ಇದಲ್ಲದೆ
ಜಿಲ್ಲೆಯಲ್ಲಿ ಹೊಸದಾಗಿ 17 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.