NEWSಕ್ರೀಡೆನಮ್ಮರಾಜ್ಯ

ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ: ಸಿಎಂ ಭರವಸೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು ಎಂದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.

2026ರಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.

ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಎನ್.ಎಸ್. ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ ಕೊಡವ ಸಮುದಾಯದ ಅನೇಕ ಮುಖಂಡರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!