NEWSಆರೋಗ್ಯನಮ್ಮರಾಜ್ಯ

ಗ್ರಾಮೀಣರಿಗೆ ಮನೆಯಲ್ಲೇ ಕೊರೊನಾ ಚಿಕಿತ್ಸೆ ನೀಡುವುದು ಅಸಾಧ್ಯ

ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಅಭಿಪ್ರಾಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಸೋಂಕಿತರು ಇನ್ಮುಂದೆ ಮನೆಯಲ್ಲೇ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ ಇದು ಗ್ರಾಮೀಣ ಭಾಗದಲ್ಲಿ ಸಾಧ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಭಾಗಕ್ಕೆ ಈ ನಿಯಮ ಓಕೆ. ಆದರೆ ಗ್ರಾಮಾಂತರದಲ್ಲಿ ಕಷ್ಟಸಾಧ್ಯ. ಕಾರಣ ಅಲ್ಲಿಯ ಮನೆಗಳು ಚಿಕ್ಕದಿರುತ್ತವೆ. ಒಂದೇ ಮನೆಯಲ್ಲಿ ಹೆಚ್ಚು ಜನರು ವಾಸಮಾಡುವುದರಿಂದ ಸೋಂಕು ಹರಡುವಿಕೆ ಹೆಚ್ಚಾಗಬಹುದು. ಹೀಗಾಗಿ, ಅಲ್ಲಿ ಹೋಂ ಕ್ವಾರಂಟೈನ್‌ಗೆ ಅವಕಾಶ ಇಲ್ಲ ಎಂದು ತಿಳಿಸಿದರು..

ನಗರಗಳಲ್ಲಿ ಈಗಾಗಲೇ 4 ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ಮುಂದುವರಿದಿದೆ. ಸೋಂಕಿತ ಚೆಸ್ಕಾಂ ಸಿಬ್ಬಂದಿಗೆ ಅಗತ್ಯ ಚಿಕಿತ್ಸೆಯನ್ನು ಆರೋಗ್ಯ ಸಿಬ್ಬಂದಿ ನೀಡುತ್ತಿದ್ದಾರೆ. ಆದರೆ, ಚಿಕಿತ್ಸೆಗೆ ಬೇಕಾದ ಅಗತ್ಯ ವಸ್ತುಗಳನ್ನು ಅವರೇ ಕೊಳ್ಳಬೇಕು. ಅಂಥವರು 17 ದಿನ ಕಡ್ಡಾಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದು ಹೇಳಿದರು.

ಇನ್ನು ಸೋಂಕಿತರು ಪ್ರತ್ಯೇಕ ಕೊಠಡಿ ಹಾಗೂ ಶೌಚಾಲ ಬಳಸಬೇಕು. ಇದನ್ನು ಖಚಿತಪಡಿಸಿಕೊಳ್ಳಲು ನಮ್ಮ ಆರೋಗ್ಯ ಸಿಬ್ಬಂದಿ ಸೋಂಕಿತರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮನೆಯಲ್ಲೇ ಚಿಕಿತ್ಸೆ ಕೊಡಬೇಕೆ ಬೇಡವೇ ಎಂದು ಸೂಚಿಸುತ್ತಾರೆ. ಒಂದುವೇಳೆ ಅಲ್ಲಿನ ವ್ಯವಸ್ಥೆ ಸರಿಯಿಲ್ಲ ಎಂದರೆ ಅವರನ್ನು ನಿಗದಿತ ಕೋವಿಡ್‌ ಆಸ್ಪತ್ರೆಗೇ ಕರೆತಂದು ಚಿಕಿತ್ಸೆ ಕೊಡಿಸಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...