NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ: ಕೇಂದ್ರ ತಂಡ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಂಗಳವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡ  ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.

ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ರಾಜ್ಯಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಸಿಎಂ ಭೇಟಿಯಾಗಿ ಚರ್ಚಿಸಿದರು.

ಈ ವೇಳೆ ಕೋವಿಡ್ ನಿಯಂತ್ರಣಕ್ಕಾಗಿ ಸಂಪರ್ಕಿತರ ಪತ್ತೆ ಹಚ್ಚುವುದು ಹಾಗೂ ಕೊ-ಮಾರ್ಬಿಡ್ ವ್ಯಕ್ತಿಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶಂಸಿಸಿರು.

ಅಲ್ಲದೇ ಮುಂದಿನ ದಿನಗಳಲ್ಲಿ, ಕೋವಿಡ್‌ದ ಉಂಟಾಗುವ ಮರಣವನ್ನು ತಡೆಗಟ್ಟಲು ಹಾಗೂ ರೋಗ ಲಕ್ಷಣ ಇರುವ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕಾಗಿದೆ. ಜತೆಗೆ ಕಂಟೇನ್‌ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಬೇಕಾಗಿದೆ ಎಂದು ಕೇಂದ್ರ ತಂಡದ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೈ ಫ್ಲೋ ಆಕ್ಸಿಜನ್ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಆಗಸ್ಟ್ 15 ರೊಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿವೆ ಎಂದು ವಿವರಿಸಿದರು.

ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ